Thursday, March 27, 2025
Flats for sale
Homeಜಿಲ್ಲೆಮಂಗಳೂರು: ವಿಷ ಆಹಾರ ಸೇವನೆ : ಹಾಸ್ಟೆಲ್, ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲು.

ಮಂಗಳೂರು: ವಿಷ ಆಹಾರ ಸೇವನೆ : ಹಾಸ್ಟೆಲ್, ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲು.

ಮಂಗಳೂರು : ರಾತ್ರಿ ಊಟದ ಬಳಿಕ ಖಾಸಗಿ ನರ್ಸಿಂಗ್ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ, ಪೋಷಕರು ಹಾಗೂ ಪೊಲೀಸ್ ಇಲಾಖೆ ಸಭೆ ನಡೆಸಿದರು. ಆಸ್ಪತ್ರೆ ಆಡಳಿತ ವಿಭಾಗ ಹಾಗೂ ನರ್ಸಿಂಗ್ ಕಾಲೇಜು ಹಾಸ್ಟೆಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಸಭೆಯಲ್ಲಿ ಪಾಲಕರು ಹಾಸ್ಟೆಲ್‌ನಲ್ಲಿರುವ ಆಹಾರ, ನೀರು ಮತ್ತು ಸೌಕರ್ಯಗಳ ಗುಣಮಟ್ಟವನ್ನು ಪ್ರಸ್ತಾಪಿಸಿದರು. ಪ್ರತಿ ವರ್ಷ ಪದೇ ಪದೇ ಆಹಾರ ವಿಷಪೂರಿತ ಪ್ರಕರಣಗಳು ನಡೆಯುತ್ತಿವೆ, ಆದರೆ ಆಡಳಿತವು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಲ್ಲಿ ವಿಫಲವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಫೆಬ್ರವರಿ 5 ರಂದು ರಾತ್ರಿ ಊಟದ ನಂತರ, ಫೆಬ್ರವರಿ 6 ರ ಸೋಮವಾರ ಮುಂಜಾನೆ 4 ಗಂಟೆಗೆ ಹಲವಾರು ವಿದ್ಯಾರ್ಥಿಗಳು ವಾಂತಿ ಮಾಡಲು ಪ್ರಾರಂಭಿಸಿದರು.

ಪ್ರಾಂಶುಪಾಲರಾದ ಶಾಂತಿ ಲೋಬೋ ಅವರ ಪ್ರಕಾರ, ಫೆಬ್ರವರಿ 6 ರಂದು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಿದ್ದರು, ಆದರೆ ಕೆಲವು ವಿದ್ಯಾರ್ಥಿಗಳು ವಾಂತಿ ಮತ್ತು ಸುಸ್ತು ಲಕ್ಷಣಗಳನ್ನು ತೋರಿಸುತ್ತಿದ್ದರು. ಸುಮಾರು 20 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು ಮತ್ತು ಸಂಜೆ ಅವರೆಲ್ಲರನ್ನು ಬಿಡುಗಡೆ ಮಾಡಲಾಯಿತು ಎಂದು ಅವರು ಹೇಳಿದರು. ರಾತ್ರಿ ಮತ್ತೆ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪರಿಸ್ಥಿತಿ ಸರಿಪಡಿಸುವವರೆಗೆ ಕಾಲೇಜು ಮುಚ್ಚಲಾಗುವುದು. ಪಾಲಕರು ಎತ್ತಿರುವ ಎಲ್ಲ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಬಗೆಹರಿಸುವವರೆಗೆ ಕಾಲೇಜು ತೆರೆಯುವುದಿಲ್ಲ. ಕೆಲವು ವಿದ್ಯಾರ್ಥಿಗಳು ಚೇತರಿಸಿಕೊಂಡ ನಂತರ ಡಿಸ್ಚಾರ್ಜ್ ಆಗಿದ್ದಾರೆ, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇನ್ನೂ ಆಸ್ಪತ್ರೆಯಲ್ಲಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ, ”ಎಂದು ಅವರು ಹೇಳಿದರು.

ವಿದ್ಯಾರ್ಥಿಗಳ ಆಸ್ಪತ್ರೆ ವೆಚ್ಚವನ್ನು ಭರಿಸುವುದಾಗಿ ಆಡಳಿತ ಮಂಡಳಿ ತಿಳಿಸಿದೆ.

ಎಸಿಪಿ ಸೌತ್ ಧನ್ಯ ಮಾತನಾಡಿ, “ಪಾಲಕರು ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಆಡಳಿತ ಮಂಡಳಿಯ ಮುಂದಿಟ್ಟಿದ್ದಾರೆ. ಆಡಳಿತ ಮಂಡಳಿಯು ಪೋಷಕರ ಮುಂದಿಟ್ಟಿರುವ ಸಮಸ್ಯೆಗಳನ್ನು ಪರಿಹರಿಸಿ ಸಮಸ್ಯೆಯನ್ನು ನಿವಾರಿಸುತ್ತದೆ. ಆಡಳಿತ ಮಂಡಳಿಯು ಸ್ಪಂದಿಸದಿದ್ದರೆ ಅಥವಾ ಸರಿಪಡಿಸಲು ವಿಫಲವಾದರೆ, ಪೋಷಕರ ಸಹಾಯಕ್ಕೆ ಪೊಲೀಸ್ ಇಲಾಖೆ ಮುಂದೆ ಬರುತ್ತದೆ.

ಪೋಷಕರು ದೂರಿನನ್ವಯ , “ಫೆಬ್ರವರಿ 5 ರಂದು ಕೆಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಸಂಭವಿಸಿದೆ. ಸಮಯಕ್ಕೆ ಸರಿಯಾಗಿ ಪೋಷಕರಿಗೆ ತಿಳಿಸಲು ಆಡಳಿತ ಮಂಡಳಿ ವಿಫಲವಾಗಿದೆ. ನೀರು, ಆಹಾರ, ಗುಣಮಟ್ಟದ ಬಗ್ಗೆ ವಿದ್ಯಾರ್ಥಿಗಳು ದೂರುತ್ತಿದ್ದರೂ ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿಲ್ಲ.

ಫೆಬ್ರವರಿ 7 ರ ಮಂಗಳವಾರ ಬೆಳಿಗ್ಗೆ, ರೋಗಲಕ್ಷಣಗಳನ್ನು ತೋರಿಸುತ್ತಿದ್ದ 13 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ವೈದ್ಯಕೀಯ ತಂಡ ಮತ್ತು ವೈದ್ಯರು ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಮತ್ತು ನೀರಿನ ಮಾದರಿಗಳನ್ನು ತೆಗೆದುಕೊಂಡು ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿದ್ದಾರೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲು ವೈದ್ಯಕೀಯ ತಂಡಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular