ಮಂಗಳೂರು : ತಾಂತ್ರಿಕ ದೋಷದಿಂದ ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರ್ ಉಚ್ಚಿಲ ಎಂಬಲ್ಲಿ ಗ್ಯಾಸ್ ಟ್ಯಾಂಕರ್ನಿಂದ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆಯಾಗುತ್ತಿದೆ. ಉಳ್ಳಾಲ ಮತ್ತು ಮಂಗಳೂರು ಪೊಲೀಸರು ಸ್ಥಳದಲ್ಲಿದ್ದಾರೆ. ಎಂಆರ್ಪಿಎಲ್ ಮತ್ತು ಅಗ್ನಿಶಾಮಕ ದಳದ ತಂಡಗಳು ಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿವೆ.
ಕಾರವಾರದಿಂದ ಕೊಚ್ಚಿ ಕಡೆಗೆ ಹೈಡ್ರೋಕ್ಲೋರಿಕ್ ಆಸಿಡ್ ಸಾಗಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕ ಗ್ಯಾಸ್ ಸೋರಿಕೆಯನ್ನು ಗಮನಿಸಿ ಕೂಡಲೇ ವಾಹನ ನಿಲ್ಲಿಸಿದ್ದಾರೆ. ಆಸಿಡ್ ಸೋರಿಕೆಯಿಂದಾಗಿ ಸಮೀಪದ ನಿವಾಸಿಗಳು ಉಸಿರಾಟದ ತೊಂದರೆ ಅನುಭವಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ದೊರೆತಿದೆ.ಹೆದ್ದಾರಿಯಲ್ಲಿ ಸಂಚಾರ ಎಂದಿನಂತೆ ಮುಂದುವರಿದಿದ್ದು, ಸ್ಥಳೀಯರಿಗೆ ಅಥವಾ ವಾಹನ ಸವಾರರಿಗೆ ಇದುವರೆಗೆ ಯಾವುದೇ ನಿರ್ದಿಷ್ಟ ಸೂಚನೆಗಳನ್ನು ನೀಡಲಾಗಿಲ್ಲ ಎಂದು ತಿಳಿದುಬಂದಿದೆ.