Thursday, November 21, 2024
Flats for sale
Homeಜಿಲ್ಲೆಮಂಗಳೂರು : ಮುನ್ನೆಚ್ಚರಿಕೆ ಕ್ರಮ ವಹಿಸದ ಹಿನ್ನೆಲೆ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರ ದುರ್ಮರಣ...

ಮಂಗಳೂರು : ಮುನ್ನೆಚ್ಚರಿಕೆ ಕ್ರಮ ವಹಿಸದ ಹಿನ್ನೆಲೆ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರ ದುರ್ಮರಣ ; VAZCO ಬೀಚ್ ರೆಸಾಟ್೯ ಸೀಲ್‌ಡೌನ್, ಮಾಲೀಕ ವಶಕ್ಕೆ.!

ಮಂಗಳೂರು : ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ವಿಮಿಂಗ್‌ಪೂಲ್‌ಗೆ ಇಳಿದಿದ್ದಾರೆ. ಈಜು ಬಾರದಿದ್ದರೂ ಮೊದಲಿಗೆ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡು, ಕೈಕೈ ಹಿಡಿದು ಆಟವಾಡುತ್ತಾ ಮುಂದೆ ಹೋಗಿದ್ದಾರೆ. ಅದರಲ್ಲಿ ಓರ್ವ ಯುವತಿ ಸ್ವಿಮಿಂಗ್‌ಪೂಲ್‌ನಲ್ಲಿದ್ದ ಟ್ಯೂಬ್ ಎತ್ತಿಕೊಳ್ಳಲು ಯತ್ನಿಸಿದ್ದಾಳೆ. ಆದರೆ, ಈಜುಕೊಳ ಆಳ ಇದ್ದ ಕಾರಣ ಮುಳುಗಲು ಯತ್ನಿಸಿದ್ದಾಳೆ. ಆಕೆಯನ್ನು ಮತ್ತೋರ್ವ ಯುವತಿ ರಕ್ಷಿಸಲು ಮುಂದಾಗಿದ್ದಾಳೆ. ಈ ವೇಳೆ, ಇಬ್ಬರೂ ನೀರಿನಲ್ಲಿ ಮುಳುಗಿ ಒದ್ದಾಡಿದ್ದಾರೆ.

ಸಿಸಿ ಟಿವಿ ದೃಶ್ಯ ದ ಹಿಒನ್ನೆಲೆ ಈಜುಕೊಳದಲ್ಲಿ ಮೂವರು ಯುವತಿಯರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸೋಮೇಶ್ವರದ VAZCO ಬೀಚ್ ರೆಸಾಟ್೯ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ. ಈ ರೆಸಾಟ್೯ನ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.

ರೆಸಾರ್ಟ್‌ನ ಈಜುಕೊಳದಲ್ಲಿ ನಿಯಮ ಪಾಲನೆ ಮಾಡದಿರುವುದೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ತನಿಖೆ ಮುಗಿಯುವವರೆಗೆ ರೆಸಾರ್ಟ್‌ಅನ್ನು ಸೀಲ್‌ಡೌನ್ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular