ಉಳ್ಳಾಲ : ಕೋಟೆಪುರದ ಫಿಶ್ ಮೀಲ್ ಫ್ಯಾಕ್ಟರಿಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿಯ ಟಯರ್ ಬ್ಲಾಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಬೆಳಿಗ್ಗೆ ರಾ.ಹೆ.66 ರ ಕಲ್ಲಾಪುವಿನಲ್ಲಿ ನಡೆದಿದ್ದು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಾರಿ ಚಾಲಕ ಸಾದಿಕ್ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮೀಲ್ ಫ್ಯಾಕ್ಟರಿಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋದ ಟಯರ್ ಸಿಡಿದು ಉರುಳಿ ಬಿದ್ದಿದೆ.
ಮಂಗಳೂರಿನಿಂದ ಉಳ್ಳಾಲಕ್ಕೆ ಚಲಿಸುತ್ತಿದ್ದ ಟೆಂಪೊ ಮತ್ತೆ ಮಂಗಳೂರಿನತ್ತ ಮುಖ ಮಾಡಿ ಪಲ್ಟಿ ಹೊಡೆದಿದೆ.ಘಟನೆ ವೇಳೆ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ದಂಪತಿ ಕೂದಳೆಲೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೆದ್ದಾರಿ ಸಂಚಾರದಲ್ಲಿ ಕೆಲ ಕಾಲ ಅಡಚಣೆಯುಂಟಾಗಿ ಸ್ಥಳಕ್ಕೆ ಬಂದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಪಲ್ಟಿ ಬಿದ್ದ ಟೆಂಪೊ ತೆರವು ಕಾರ್ಯಾಚರಣೆ ನಡೆಯುತ್ತಿದೆ.