ಬೆಂಗಳೂರು : ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಮಹಿಳೆ ಹಾಗೂ ಆಕೆಯ ಮೂರು ವರ್ಷದ ಮಗ ಸಾವನ್ನಪ್ಪಿದ್ದು, ಆಕೆಯ ಪತಿ ಮತ್ತು ಮತ್ತೊಬ್ಬ ಪುತ್ರ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.
ಮಂಗಳವಾರ ಸ್ಕೂಟಿಯಲ್ಲಿ ಕುಟುಂಬ ಸಮೇತರಾಗಿ ಎಚ್‌ಬಿಆರ್ ಲೇಔಟ್ ಬಳಿ ಮೆಟ್ರೊ ಕಾಮಗಾರಿ ನಡೆಯುತ್ತಿರುವ ಜಾಗದಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಮೃತರನ್ನು 25 ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗ ವಿಹಾನ್ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಸಿವಿಲ್ ಇಂಜಿನಿಯರ್ ಲೋಹಿತ್ ಕುಮಾರ್ ತನ್ನ ಹೆಂಡತಿ ತೇಜಸ್ವಿನಿಯನ್ನು ಅವಳ ಕೆಲಸಕ್ಕೆ ಮತ್ತು ಮಕ್ಕಳನ್ನು ಮಕ್ಕಳ ಆರೈಕೆ ಕೇಂದ್ರಕ್ಕೆ ಬಿಡುತ್ತಿದ್ದರು .
ಲೋಹಿತ್ ಕುಮಾರ್ ಹಾಗೂ ಮತ್ತೊಬ್ಬ ಪುತ್ರ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ತೇಜಸ್ವಿನಿ ಮತ್ತು ವಿಹಾನ್ ತಲೆಗೆ ದೊಡ್ಡ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ತೇಜಸ್ವಿನಿ ಧಾರವಾಡ ಮೂಲ ದೇವರು ಎಂದು ತಿಳಿದು ಬಂದಿದೆ
ಘಟನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ನಿಂದ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಪಡೆಯುವುದಾಗಿ ಹೇಳಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.