ಮುಂಬೈ : ಸಾಕಷ್ಟು ಹಗ್ಗ ಜಗ್ಗಾಟದ ನಂತರ ಮಹಾರಾಷ್ಟçದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರಫಡ್ನವಿಸ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಏಕ್‌ನಾಥ್‌ಶಿಂಧೆ ಮತ್ತು ಅಜಿತ್‌ಪವಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಫಡ್ನವಿಸ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ನಾಳೆ ಸಂಜೆ 5.3೦ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭ ಮುಂಬೈ ನಗರದ ಆಜಾದ್ ಮೈದಾನದಲ್ಲಿ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ಬಿಜೆಪಿ ಫಡ್ನವಿಸ್‌ಹೆಸರು
ಮುಂಚೂಣಿಯಲ್ಲಿದ್ದ ಕಾರಣ ಮಹಾರಾಷ್ಟç ಹಂಗಾಮಿ ಮುಖ್ಯಮAತ್ರಿ ಶಿವಸೇನೆಯ ಶಿಂಧೆ ಬಣ ಮುಖ್ಯಸ್ಥ ಏಕ್‌ನಾಥ್ ಶಿಂಧೆ ಅವರು ನೂತನ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಅಲಂಕರಿಸಲು
ಒಪ್ಪಿಕೊAಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫಡ್ನವಿಸ್ ಅವರು ತಡರಾತ್ರಿ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ವರ್ಷಾದಲ್ಲಿ ಶಿಂಧೆ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ಕಳೆದವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಈ ಇಬ್ಬರು ನಾಯಕರು ಇದೇ ಮೊದಲ ಬಾರಿಗೆ ಭೇಟಿಯಾಗಿದ್ದರು
ಮೋದಿ-ಶಾ ಭಾಗಿ ನಾಳೆ ಸಂಜೆ ನಡೆಯಲಿರುವ ಫಡ್ನವಿಸ್ ಅವರ ಪ್ರಮಾಣವಚನ ಸ್ವೀಕಾರಸಮಾರಂಭದಲ್ಲಿ ಪ್ರಧಾನಿ ನರೇಂಧ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ಗ ಡ್ಕರಿ, ಪಿಯೂಷ್ ಗೋಯಲ್, ರಾಜನಾಥ್‌ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬಿಜೆಪಿ ರಾಜ್ಯಗಳ ಆಡಳಿತವಿರುವ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ನ. ೨೦ ರಂದು ನಡೆದ ಮಹಾರಾಷ್ಟ್ರ ವಿಧಾನಸಭೆಯ ಚುನಾವಣೆಯಲ್ಲಿ 288 ಸ್ಥಾನಗಳ ಪೈಕಿ 132 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿತ್ತು. ಮಿತ್ರ ಪಕ್ಷಗಳಾದ ಏಕ್‌ನಾಥ್‌ಶಿಂಧೆ ನೇತೃತ್ವದ ಶಿವಸೇನೆ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಉಳಿದ ಸ್ಥಾನಗಳನ್ನು ಪಡೆದುಕೊಂಡಿತ್ತು. ಒಟ್ಟು ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು 230 ಸ್ಥಾನಗಳಲ್ಲಿ ಜಯಭೇರಿ ಭಾರಿಸಿತ್ತು.