ನವದೆಹಲಿ : ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಹಿಂಸಾಚಾರ ಹಾಗೂ ಇಸ್ಕಾನ್ ಸಂತ ಚಿನ್ಮಯ್ ಬ್ರಹ್ಮಚಾರಿ ಬಂಧನದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಲು ಮನವಿ ಮಾಡಿಕೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಬಾಂಗ್ಲಾ ದೇಶದ ಗಡಿಯಲ್ಲಿ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ 1000ಕ್ಕೂ ಹೆಚ್ಚು ಸಂತರು ಜಮಾಯಿಸಿ ಚಿನ್ಮಯ್ ದಾಸ್ ಅವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ಪೆಟ್ರಾಪೋಲ್ಚೆ ಕ್‌ಪೋಸ್ಟ್ನಿಂದ ಕೇವಲ 800 ಮೀಟರ್ ದೂರದಲ್ಲಿ ಸೇರಿದ ಅಖಿಲ ಭಾರತೀಯ ಸಂತ ಸಮಿತಿಯ ಸಂತರು ಜಮಾಯಿಸಿದ್ದರು. ಸಮಿತಿಯ ಬಂಗಾಳದ ಮುಖ್ಯಸ್ಥ ಸ್ವಾಮಿ ಪರಮಾತ್ಮಾನಂದ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ಬಾಂಗ್ಲಾದೇಶದಲ್ಲಿ ಹಿಂದೂ ಸಂತರ ಮೇಲೆ ದೌರ್ಜನ್ಯ ಮತ್ತು ದೇವಸ್ಥಾನಗಳ ಮೇಲೆ ದಾಳಿ ನಿಲ್ಲುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕೂಡ ಬುಧವಾರ ಪೆಟ್ರಾಪೋಲ್ ಗಡಿ ಬಳಿ ಹಿಂದೂ ಜಾಗರಣ ಮಂಚ್‌ನಿಂದ ಬುಧವಾರ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಗಡಿಯಲ್ಲಿ ಮಾನವ ಸರಪಳಿ ರಚಿಸಿ, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಿಲ್ಲಿಸುವಂತೆ ಒತ್ತಾಯಿಸಲಿದ್ದೇವೆ ಎಂದಿದ್ದಾರೆ. ದೇಶಾದ್ಯಂತ ಇಸ್ಕಾನ್‌ನ ವತಿಯಿಂದ ಪ್ರಾರ್ಥನೆ ನಡೆಯುತ್ತಿದೆ.