Thursday, March 27, 2025
Flats for sale
Homeರಾಜ್ಯಮೈಸೂರು: ಪ್ರಧಾನಿ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ,ಗಂಭೀರ ಗಾಯ!

ಮೈಸೂರು: ಪ್ರಧಾನಿ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ,ಗಂಭೀರ ಗಾಯ!

ಮೈಸೂರು: ಮೈಸೂರಿನಲ್ಲಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಹ್ಲಾದ್ ಮೋದಿ ಅವರು ಪತ್ನಿ, ಮಗ ಮತ್ತು ಸೊಸೆಯೊಂದಿಗೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಮೈಸೂರು ಸಮೀಪದ ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಈ ಅಹಿತಕರ ಘಟನೆ ನಡೆದಿದೆ. ಕಡಕೋಳ ಸಮೀಪದ ಸ್ಥಳದಲ್ಲಿ ಈ ದುರ್ಘಟನೆ ನಡೆದಿದೆ.

ಮೈಸೂರು ಎಸ್​ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಪ್ರಹ್ಲಾದ್ ಮೋದಿ ಅವರ ಪುತ್ರ ಮತ್ತು ಸೊಸೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular