ಶಿವಮೊಗ್ಗ : ಫೆಬ್ರವರಿ 12 ರಂದು ಶಿವಮೊಗ್ಗ ಸೋಗಾನೆ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಲಿದ್ದಾರೆ ಎಂದು ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಹೇಳಿದ್ದಾರೆ.
ಭಾನುವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದರು, ವಿಮಾನ ನಿಲ್ದಾಣದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದರು.