ಬೆಂಗಳೂರು : ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು” ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅನಾರೋಗ್ಯದಿಂದಾಗಿ ತಮ್ಮ 82 ನೇ ವಯಸ್ಸಿನಲ್ಲಿ ಕೊನೆಯಿಸಿರೆಳೆದಿದ್ದಾರೆ.ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಬೆಳಗ್ಗೆ 11 ಕ್ಕೆ ವಿಜಯಪುರಕ್ಕೆ ಪ್ರಯಾಣಿಸಲಿದ್ದಾರೆ. ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಶ್ರೀಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಸಿಎಂ ಬೊಮ್ಮಾಯಿ “ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು” ಎಂದು ಕಂಬನಿ ಮಿಡಿದಿದ್ದಾರೆ.
ಸಕಲ ಸರ್ಕಾರೀ ಗೌರವಗಳೊಂದಿಗೆ ಸಾಯಂಕಾಲ ಐದು ಗಂಟೆಗೆ ಅಂತ್ಯಕ್ರಿಯೆ ಜರುಗಲಿದ್ದು, ಸೈನಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ದರ್ಶನದ ವ್ಯವಸ್ಥೆಯನ್ನು ಮಾಡಲಾಗಿದೆ.ಸಿಎಂ ಜೊತೆ ಸಚಿವ ಸಂಪುಟದ ಸದಸ್ಯರು ಸಹಿತ ವಿಜಯಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.