Monday, March 17, 2025
Flats for sale
Homeಜಿಲ್ಲೆತಲೆನೋವು,ಜ್ವರದಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿ ಸಾವು.ಮೆದುಳು ಜ್ವರದಿಂದ ಸಾವನ್ನಪಿರುವ ಶಂಕೆ.

ತಲೆನೋವು,ಜ್ವರದಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿ ಸಾವು.ಮೆದುಳು ಜ್ವರದಿಂದ ಸಾವನ್ನಪಿರುವ ಶಂಕೆ.

ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಎರಡು ದಿನಗಳಿಂದ ಜ್ವರ ,ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದನಂತೆ.

ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ ,ಕುಟುಂಬ ಹಾಗೂ ಸ್ಥಳೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.ಎರಡು ವರ್ಷಗಳ ಹಿಂದೆ ಅಶ್ವಿತ್ ನ ತಂದೆ ಅವಘಡವೊಂದರಲ್ಲಿ ಸಾವನ್ನಪ್ಪಿದ್ದರು.ಕೊಲ್ಯ ಸಾರಸ್ವತ ಕಾಲನಿಯ ಮನೆಯಲ್ಲಿ ಅಶ್ವಿತ್ ತಾಯಿಯೊಂದಿಗೆ ವಾಸವಿದ್ದ.ಅಶ್ವಿತ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿ ಪಾತ್ರನಾಗಿದ್ದ.

ಮೃತ ಅಶ್ವಿತ್ ಗೆ ಕೊನೆಯ ಕ್ಷಣದಲ್ಲಿ ಮಿದುಳು ಜ್ವರದ ಲಕ್ಷಣ ಇತ್ತೆಂದು ಹೇಳಲಾಗಿದೆ.ಆತನಿಗೆ ಮಿದುಳು ಜ್ವರದ ವ್ಯಾಕ್ಸಿನೇಷನ್‌ ಆಗಿದೆಯೇ ಎಂದು ಇನ್ನೂ ಧೃಡಪಟ್ಟಿಲ್ಲ.ಈ ಬಗ್ಗೆ ತಜ್ನ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ಬಾಲಕನ ಅಂತ್ಯ ಸಂಸ್ಕಾರ ಗುರುವಾರ ಮಧ್ಯಾಹ್ನ ನಡೆದಿದ್ದು ಊರಿಗೇ ಊರೇ ರೋಧಿಸುವ ದೃಶ್ಯ ಮನಕಲಕುವಂತಿತ್ತು.

ಕೇಂದ್ರ ಮತ್ತು ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರವು ಯೋಜನೆಗೆ ಅನುಮೋದನೆ ನೀಡಲು ವಿಳಂಬವಾಗಿದೆ ಎಂದು ದೂಷಿಸಲು ಕಾಂಗ್ರೆಸ್ ಚುನಾವಣಾ ವಿಷಯವಾಗಿ ಯಾತ್ರೆಯನ್ನು ಪ್ರಾರಂಭಿಸಲು ಯೋಜಿಸಿದ್ದರಿಂದ, ಬಿಜೆಪಿ ಸರ್ಕಾರಗಳು ಜಲಶಕ್ತಿ ಸಚಿವಾಲಯದಿಂದ ಶೀಘ್ರವಾಗಿ ಒಪ್ಪಿಗೆ ಪಡೆಯುವ ಒತ್ತಡಕ್ಕೆ ಒಳಗಾಗಿದ್ದವು.

RELATED ARTICLES

LEAVE A REPLY

Please enter your comment!
Please enter your name here

Most Popular