ಮಂಗಳೂರು : 2023 ರ ಜನವರಿಯಲ್ಲಿ ಮಂಗಳೂರು ನಗರದಲ್ಲಿ ಕರಾವಳಿ ಉತ್ಸವವನ್ನು ಆಯೋಜಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ ತಿಳಿಸಿದ್ದಾರೆ.
ಉತ್ಸವ ಆಯೋಜನೆಯ ವಿಧಾನಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಅವರೊಂದಿಗೆ ಸಮಾಲೋಚಿಸಿ ಉತ್ಸವದ ದಿನಾಂಕಗಳನ್ನು ನಿಗದಿಪಡಿಸಲಾಗುವುದು ಎಂದರು.
ಉತ್ಸವವನ್ನು ಆಯೋಜಿಸಲು ಅನುದಾನ ಕೋರಿ ಜಿಲ್ಲಾಡಳಿತವು ಸರ್ಕಾರಕ್ಕೆ ಪತ್ರ ಬರೆಯಲಿದ್ದು, ವಿವಿಧ ಸಮಿತಿಗಳು ಮತ್ತು ಉಪಸಮಿತಿಗಳನ್ನು ರಚಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.