ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ದಗೆ ಹೆಚ್ಚುತ್ತಿದಂತೆ ಅಲ್ಲಲ್ಲಿ ಮಳೆಯಾಗುತ್ತಿರುವುದು ಕಂಡುಬಂದಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಸುರಿದ ಮಳೆಗೆ ಮರ ಬೈಕ್ ಮೇಲೆ ಮುರಿದು ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಜೀವನಹಳ್ಳಿಯ ಪೂರ್ವ ಪಾರ್ಕ್ ಬಳಿ ನಡೆದಿದೆ.
ಮರ ಬಿದ್ದು ಮಗುವಿಗೆ ಗಂಭೀರ ಗಾಯವಾಗಿತ್ತು. ತಕ್ಷಣ ಮಗುವನ್ನು ಫೋಷಕರು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ಮಗುವನ್ನು ರಕ್ಷಾ ಎಂದು ಗುರುತಿಸಲಾಗಿದೆ. ತಂದೆಯ ಜೊತೆ ಮಗು ಬೈಕ್‍ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆದರೆ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.ಪುಟ್ಟ ಮಗು ಮೃತಪಟ್ಟ ವಿಷಯ ತಿಳಿದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.