Saturday, July 25, 2026
Homeಜಿಲ್ಲೆಉಡುಪಿ: ಖಾಸಗಿ ಬಸ್ ಕಂಡಕ್ಟರ್ ಹಾಗೂ ಕೆಎಸ್ ಆರ್ ಟಿಸಿ ಬಸ್ ಚಾಲಕ ರಿಬ್ಬರ ನಡುವೆ...

ಉಡುಪಿ: ಖಾಸಗಿ ಬಸ್ ಕಂಡಕ್ಟರ್ ಹಾಗೂ ಕೆಎಸ್ ಆರ್ ಟಿಸಿ ಬಸ್ ಚಾಲಕ ರಿಬ್ಬರ ನಡುವೆ ಮಾರಮಾರಿ.

ಉಡುಪಿ : ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಮತ್ತು ಖಾಸಗಿ ಬಸ್ಸಿನ ಕಂಡಕ್ಟರ್ ನಡುವೆ ಮಾತಿನ ಚಕಮಕಿ ನಡೆದು, ಸಾರ್ವಜನಿಕರ ಸಮ್ಮುಖದಲ್ಲಿ ಹೊಡೆದಾಡಿದ ಘಟನೆ ಸೋಮವಾರ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ.

ಎರಡೂ ಬಸ್‌ಗಳನ್ನು ರಸ್ತೆ ಮಧ್ಯೆ ನಿಲ್ಲಿಸಲಾಗಿದ್ದು, ಕ್ಲಿಯರೆನ್ಸ್ ನೀಡುವ ವಿಚಾರದಲ್ಲಿ ಇಬ್ಬರೂ ಜಗಳವಾಡಿದ್ದಾರೆ. ಖಾಸಗಿ ಬಸ್ಸಿನ ಕಂಡಕ್ಟರ್ ಕೆಎಸ್ಆರ್ಟಿಸಿ ಬಸ್ಸಿನ ಚಾಲಕನನ್ನು ನಿಂದಿಸಿದ್ದಾನೆ. ಇದರಿಂದ ಕುಪಿತಗೊಂಡ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮಹಮ್ಮದ್ ಸೈಯದ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾನೆ. ಕಂಡಕ್ಟರ್‌ನ ಕಾಲರ್‌ ಎಳೆದುಕೊಂಡು ಪಾದರಕ್ಷೆಯಿಂದ ಹೊಡೆದಿದ್ದಾನೆ. ಇಬ್ಬರೂ ಒಬ್ಬರ ಮೇಲೊಬ್ಬರು ಬಿದ್ದು ಪೆಟ್ಟು ಮಾಡಿಕೊಂಡರು.

ಮೊದಲು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular