ಉಳ್ಳಾಲ : ಮೈಸೂರು ಮೂಲದ ಮೂವರು ಯುವತಿಯರು ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಅಡ್ಡರಸ್ತೆಯ ಪೇರಿಬೈಲ್ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮೈಸೂರು ಮೂಲದ ಕುರುಬರ ಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತಾ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ ,ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಎಂದು ತಿಳಿದುಬಂದಿದೆ.
ಪ್ರವಾಸಕ್ಕಾಗಿ ಬಂದಿದ್ದ ಇವರು ನಿನ್ನೆ ಬೆಳಗ್ಗೆ ವಾಝ್ಕೊ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೂವರು ಯುವತಿಯರು ರೂಮ್ ನಂ 2’ರಲ್ಲಿ ತಂಗಿದ್ದರು. ಓರ್ವ ಯುವತಿ ನೀರಿನಲ್ಲಿ ಮುಳುಗಿದ್ದು ಮತ್ತೊಬ್ಬಳು ಆಕೆಯನ್ನು ರಕ್ಷಿಸಲು ಮುಂದಾದಾಗ ಆಕೆಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮೂರನೇ ಯುವತಿ ಇಬ್ಬರನ್ನು ರಕ್ಷಿಸಲು ನೀರಿಗೆ ಇಳಿದ ಸಂದರ್ಭದಲ್ಲಿ ಈಜು ಬಾರದೆ ಸಾವನ್ನಪ್ಪಿದ್ದಾರೆ ಯುವತಿಯರು ಮೊಬೈಲ್ ವಿಡಿಯೋ ರೆಕಾರ್ಡ್ ಮಾಡಿ ರೀಲ್ಸ್ ಮಾಡುತ್ತಿರುವ ವಿಡಿಯೋ ಪೊಲೀಸರಿಗೆ ದೊರತಿದ್ದು ಘಟನೆಯ ಬಗ್ಗೆ ಪರೀಶೀಲನೆ ನಡೆಸುತ್ತಿದ್ದಾರೆ.