ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಮಂಡ್ಯ ಮಿಲ್ಕ್ ಯೂನಿಯನ್ ಲಿಮಿಟೆಡ್ (ಮನ್ಮುಲ್) ವತಿಯಿಂದ 260.9 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾದ ಮೆಗಾ ಡೈರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಉದ್ಘಾಟಿಸಿದರು. ಐದು ಎಕರೆ ಪ್ರದೇಶದಲ್ಲಿ ಮೆಗಾ ಡೈರಿ ಸ್ಥಾಪಿಸಲಾಗಿದೆ…
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ, ಬಿಜೆಪಿ ಮುಖಂಡರಾದ ಪ್ರಹ್ಲಾದ್ ಜೋಶಿ, ಕೆ.ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕೆ.ಸಿ.ನಾರಾಯಣಗೌಡ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಶಾಸಕ ಸಿ.ಎಸ್.ಪುಟ್ಟರಾಜು ಮತ್ತಿತರರು ಭಾಗವಹಿಸಿದ್ದರು.
ಗೃಹ ಸಚಿವ ಅಮಿತ್ ಶಾ ವಿಶೇಷ ಹೆಲಿಕಾಪ್ಟರ್ ಮೂಲಕ ಮಲ್ಲಿಗೆಪುರದ ಹೆಲಿಪ್ಯಾಡ್ ತಲುಪಿ ರಸ್ತೆ ಮೂಲಕ ಗೆಜ್ಜಲಗೆರೆಗೆ ಪ್ರಯಾಣ ಬೆಳೆಸಿದರು.
ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಗೆಜ್ಜಲಗೆರೆ ಪೊಲೀಸ್ ಕೋಟೆಯಾಗಿ ಮಾರ್ಪಟ್ಟಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 800 ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಮೆಗಾ ಡೈರಿಯಿಂದ ಮಹಿಳೆಯರು ಸೇರಿದಂತೆ ಒಂದು ಲಕ್ಷ ಹೈನುಗಾರರಿಗೆ ಅನುಕೂಲವಾಗಲಿದೆ. ಹಸಿರು ಕ್ರಾಂತಿಯ ನಂತರ ರಾಜ್ಯವು ಶ್ವೇತ ಕ್ರಾಂತಿಗೆ ಸಜ್ಜಾಗಿದೆ. ಮನ್ಮುಲ್ ಮೆಗಾ ಡೈರಿ ರಾಜ್ಯದಲ್ಲಿ ಎರಡನೇ ಅತಿ ದೊಡ್ಡ ಡೈರಿಯಾಗಿದ್ದು, ನಿಮ್ಮನ್ನು ಸಬಲೀಕರಣಗೊಳಿಸುತ್ತಿದೆ…
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಸಹಕಾರಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ಗೃಹ ಸಚಿವರ ಗಮನ ಸೆಳೆದರು.
ಮಂಡ್ಯವನ್ನು ಅರ್ಥಮಾಡಿಕೊಂಡರೆ ಭಾರತವನ್ನು ಅರ್ಥಮಾಡಿಕೊಂಡಂತೆ ಎಂದು ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮಿ ಹೇಳಿದರು. ರೈತರು ದೇಶದ ಶಕ್ತಿ. ದೇಶದ ಶೇಕಡ 65ರಷ್ಟು ಜನರು ರೈತರಿದ್ದಾರೆ.
ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, “ವರ್ಷಗಳ ಹಿಂದೆಯೇ ಪ್ರತ್ಯೇಕ ಸಹಕಾರಿ ಸಚಿವಾಲಯದ ಬೇಡಿಕೆಯನ್ನು ಪರಿಗಣಿಸಿದ್ದರೆ, ಈಗ ಹೈನುಗಾರರ ಸ್ಥಿತಿ ಸಂಪೂರ್ಣವಾಗಿ ಬದಲಾಗುತ್ತಿತ್ತು, ಸಹಕಾರಿ ಕ್ಷೇತ್ರದ ಕಾರ್ಯಕರ್ತರಿಗೆ ಅನ್ಯಾಯವಾಗಲು ಬಿಡುವುದಿಲ್ಲ.