ಉಳ್ಳಾಲ,ಡಿ.24; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ನೋಂ), ಉಳ್ಳಾಲ ತಾಲೂಕು ಘಟಕದ 2022-2025 ಸಾಲಿಗೆ ಅಧ್ಯಕ್ಷ ರಾಗಿ ವಸಂತ ಕೊಣಾಜೆ,ಉಪಾಧ್ಯಕ್ಷ ರಾಗಿ ದಿನೇಶ್,ಆರಿಫ್ ಕಲ್ಕಟ್ಟ,ಪ್ರಧಾನ ಕಾರ್ಯದರ್ಶಿ ಯಾಗಿ ಶಶಿಧರ ಪೊಯ್ಯತ್ತ ಬೈಲ್,ಕಾರ್ಯದರ್ಶಿಯಾಗಿ ಸತೀಶ್ ಕೊಣಾಜೆ ,ವಜ್ರೇಶ್ವರಿ ಕೋಶಾಧಿಕಾರಿ ಯಾಗಿ ಅಬ್ದುಲ್ ಬಶೀರ್ ,ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಸಾದ್ ಸುವರ್ಣ, ಶ್ವೇತಾ,ಶಿವಶಂಕರ್ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಶನಿವಾರ ಉಳ್ಳಾಲ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಕಚೇರಿಯಲ್ಲಿಚುನಾವಣಾ ಧಿಕಾರಿ ಪುಷ್ಪ ರಾಜ್ ಬಿ.ಎನ್ ಘೋಷಿ ಸಿದ್ದಾರೆ.
ಈ ಸಂದರ್ಭದಲ್ಲಿ ಉಪ ಚುನಾವ ಣಾಧಿಕಾರಿ ರಾಜೇಶ್ ಕುಮಾರ್ ದಡ್ಡಂಗಡಿ, ಸಹಾಯಕ ಚುನಾವಣಾಧಿಕಾರಿ ಭರತ್ ರಾಜ್ ಉಪಸ್ಥಿತರಿದ್ದರು.ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ,ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ,ರಾಷ್ಟ್ರೀಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದು ನೂತನ ಪದಾಧಿಕಾರಿ ಗಳನ್ನು ಅಭಿನಂದಿಸಿದರು.