ಮಂಗಳೂರು : ಡಿಸೆಂಬರ್ 31 ರಂದು ಹೊಸ ವರ್ಷದ ಮುನ್ನಾದಿನ ಸಂಭ್ರಮಾಚರಣೆ ಹೆಸರಿನಲ್ಲಿ ಅಶ್ಲೀಲ ನೃತ್ಯ, ಮಾದಕ ದ್ರವ್ಯ ಹಾಗೂ ಮದ್ಯದಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡದಂತೆ ಒತ್ತಾಯಿಸಿ ಬಜರಂಗದಳ (ಬಿಡಿ) ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ .
ಸಲ್ಲಿಸಿರುವ ಮನವಿಯಲ್ಲಿ, “ಹೊಸ ವರ್ಷದ ಹೆಸರಿನಲ್ಲಿ ನಡೆಯುವ ಪಾರ್ಟಿಗಳು ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಆಧರಿಸಿರುವುದರಿಂದ ಭಜರಂಗದಳವು ಕಟುವಾಗಿ ವಿರೋಧಿಸುತ್ತದೆ. ಈಗಾಗಲೇ ಲವ್ ಜಿಹಾದ್ ಹೆಸರಿನಲ್ಲಿ ಹುಡುಗಿಯರನ್ನು ಮೂರ್ಖರನ್ನಾಗಿಸಿ ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸುತ್ತಿದ್ದಾರೆ.
“ಈ ಪಾರ್ಟಿಗಳಿಂದಾಗಿ ಡ್ರಗ್ಸ್ ಮತ್ತು ಸೆಕ್ಸ್ ಮಾಫಿಯಾ ತಮ್ಮ ಜಾಲವನ್ನು ವಿಸ್ತರಿಸಿಕೊಳ್ಳುವ ಸಾಧ್ಯತೆಗಳಿವೆ. ನಿಗದಿತ ಸಮಯದೊಳಗೆ ಎಲ್ಲ ಬಾರ್ ಮತ್ತು ಪಬ್ ಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು’ ಎಂದು ಮನವಿಯಲ್ಲಿ ತಿಳಿಸಲಾಗಿದೆ.