ಯಾದಗಿರಿ : ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ಕಾರು-ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಹಳ್ಳೆಪ್ಪ (45) ಮಲ್ಲಯ್ಯ(35) ಎಂದು ಗುರುತಿಸಲಾಗಿದೆ.
ಜೇವರ್ಗಿ ತಾಲೂಕಿನ ಚಿಕ್ಕಮುದವಾಳ ಗ್ರಾಮದ ಬಳಿಯಿರುವ ಜಮೀನು ನೋಡಿಕೊಂಡು ಬರಲು ಬೈಕ್ ನಲ್ಲಿ ಹೋಗಿದ್ದ ಸಂದರ್ಭದಲ್ಲಿ ವಾಪಸ್ ಊರಿಗೆ ಬರುವಾಗ ಕಾರನ್ನು ಓವರ್ ಟೆಕ್ ಮಾಡಲು ಹೋಗಿ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ನಡೆದ ದುರ್ಘಟನೆ ಬೈಕ್ ನಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದು ಭೀ.ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.