Friday, March 13, 2026
Flats for sale
Homeಜಿಲ್ಲೆಉಡುಪಿ : ಕಾರ್ಕಳ ಪರಶುರಾಮ ಥೀಮ್‌ ಪಾರ್ಕ್‌ ಹಗರಣ ಸಿಐಡಿ ತನಿಖೆಗೆ ಆದೇಶ.

ಉಡುಪಿ : ಕಾರ್ಕಳ ಪರಶುರಾಮ ಥೀಮ್‌ ಪಾರ್ಕ್‌ ಹಗರಣ ಸಿಐಡಿ ತನಿಖೆಗೆ ಆದೇಶ.

ಉಡುಪಿ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು.ಈ ಪ್ರಯುಕ್ತ ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಲ್ಲದೇ ಸ್ವತಃ ಜಿಲ್ಲೆಯ ಕಾಂಗ್ರೆಸ್​ ಕಾರ್ಯಕರ್ತರು ಈ ಪ್ರಕರಣದ ತನಿಖೆ ಪ್ರಾರಂಭವಾಗುವವರೆಗೂ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದು ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಮಾಧ್ಯಮಗಳಲ್ಲೂ ಈ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಸಿಐಡಿಗೆ ವಹಿಸಿದ್ದಾರೆ.

ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 2023ರ ಜ. 17ರಂದು ಉದ್ಘಾಟಿಸಿದ್ದರು. ಇಡೀ ಥೀಮ್ ಪಾರ್ಕ್ ಅನ್ನು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅದರಲ್ಲಿ ಬೃಹತ್ತಾದ ಪರಶುರಾಮನ ಪುತ್ಥಳಿ, ಬಯಲು ರಂಗ ಮಂದಿರ, ಆರ್ಟ್ ಗ್ಯಾಲರಿ, ಭಜನಾ ಮಂದಿರವನ್ನ ನಿರ್ಮಿಸಲಾಗಿತ್ತು ಆದ್ರೆ, ಪರಶುರಾಮನ ಪುತ್ಥಳಿಯನ್ನು ಕಂಚು ಮತ್ತು ಉಕ್ಕಿನಿಂದ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗಿತ್ತು.ಆದರೆ ಮೂರ್ತಿ ಫೈಬರ್​ನಿಂದ ನಿರ್ಮಾಣ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಅಲ್ಲದೇ ಸಾಕ್ಷಿ ಸಮೇತ ಕಾಮಗಾರಿಯಲ್ಲಾದ ಅಕ್ರಮವನ್ನು ಬಯಲಿಗೆಳೆದಿದ್ದರು.

ಈ ಪುತ್ಥಳಿಯನ್ನು ಫೈಬರ್‌ನಿಂದ ನಿರ್ಮಿಸಲಾಗಿದ್ದು, ಕಂಚು, ಉಕ್ಕು ಬಳಸಲಾಗಿದೆ ಎಂದು ಹೇಳಿ ಆ ಹಣವನ್ನು ಈ ಥೀಮ್ ಪಾರ್ಕ್ ನಿರ್ಮಿಸುವ ಜವಾಬ್ದಾರಿ ಹೊತ್ತಿದ್ದ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಸುನಿಲ್ ಕುಮಾರ್ ಅವರು ಲೂಟಿ ಮಾಡಿದ್ದಾರೆ ಆರೋಪಿಸಿದ್ದರು.ಇದೀಗ ಅಂತಿಮವಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು, ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾದಂತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular