ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಪೊಲೀಸರು ಗುರುವಾರ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯಲ್ಲಿರುವ ಅವರ ನಿವಾಸದಲ್ಲಿ ಬಂಧಿಸಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ದೊರೆತಿದೆ. ಬ್ರಹ್ಮಾವರ ತಾಲೂಕು ನ್ಯಾಯಾಲಯವು ಜಾಮೀನು ನೀಡಿದೆ.
ಬ್ರಹ್ಮಾವರ ತಾಲೂಕು ಸಂಚಾರಿ ಪೀಠ ಜಾಮೀನು ಮಂಜೂರು ಮಾಡಿದ್ದು ಭವಿಷ್ಯದಲ್ಲಿ ಇಂತಹ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ಎಚ್ಚರಿಕೆ ನೀಡಿದೆ.
ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲ ವಿಜಯ ವಾಸು ಪೂಜಾರಿ ವಾದ ಮಂಡಿಸಿದರು. “ಬಂಧಿಸಿದ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ. ಪ್ರಥಮ ನೋಟಿಸ್ ನೀಡಿ ಅದರ ಅವಧಿ ಮುಗಿಯುವ ಮುನ್ನವೇ ಎರಡನೇ ನೋಟಿಸ್ ನೀಡಿದ್ದಾರೆ. ತಿಮರೋಡಿಯವರ ಹೇಳಿಕೆಯಿಂದ ಯಾವುದೇ ಕೋಮು ಗಲಭೆಗಳು ಆಗಿಲ್ಲ. ತಿಮರೋಡಿ ಕೂಡ ಓರ್ವ ಹಿಂದೂ ನಾಯಕ. ಇನ್ನೊಂದು ಧರ್ಮವನ್ನು ಅವರು ದೂಷಿಸಿಲ್ಲ” ಎಂದು ಪೀಠಕ್ಕೆ ತಿಳಿಸಿದರು.
ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ, ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯದೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ನ್ಯಾಯಾದೀಶ ಎನ್.ಎ ನಾಗೇಶ್ ಅವರು, ಇನ್ಮುಂದೆ ಈ ತರದ ನ್ಯೂ ಸೆನ್ಸ್ ಮಾಡಕೂಡದು ಎಂದು ಎಚ್ಚರಿಸಿ, ಜಾಮೀನು ಮಂಜೂರು ಮಾಡಿದೆ.