ಉಡುಪಿ : ಬಿಜೆಪಿಯ ಹಿರಿಯ ಮುಖಂಡ ಹಾಗೂ ಹೊಟೇಲ್ ಉದ್ಯಮಿ ಬಿ ಸುಧಾಕರ ಶೆಟ್ಟಿ ಅವರು ಜನವರಿ 4, ಗುರುವಾರ ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಸುಧಾಕರ ಶೆಟ್ಟಿ ಉಡುಪಿಯ ಶಾರದಾ ಇಂಟರ್‌ನ್ಯಾಶನಲ್ ಹೋಟೆಲ್ ಮಾಲೀಕರಾಗಿದ್ದರು. 2013ರಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.


