Thursday, July 23, 2026
Homeಜಿಲ್ಲೆಉಡುಪಿ ; ಭಾರಿ ಮಳೆಗೆ ಹೆಬ್ರಿಯಲ್ಲಿ ಮೇಘಸ್ಫೋಟದಿಂದ ಪ್ರವಾಹ,ಕೊಚ್ಚಿ ಹೋದ ಕಾರು, ಬೈಕು..!

ಉಡುಪಿ ; ಭಾರಿ ಮಳೆಗೆ ಹೆಬ್ರಿಯಲ್ಲಿ ಮೇಘಸ್ಫೋಟದಿಂದ ಪ್ರವಾಹ,ಕೊಚ್ಚಿ ಹೋದ ಕಾರು, ಬೈಕು..!

ಉಡುಪಿ ; ರಾಜ್ಯದಲ್ಲಿ ಈ ಬಾರಿ ಸುರಿದ ಮಳೆಗೆ ಅಲ್ಲಲ್ಲಿ ಹಲವು ಅವಾಂತರ ಸೃಷ್ಟಿ ಯಾಗಿದೆ ಜನಜೀವನ ಅಸ್ಥವ್ಯಸ್ತಗೊಂಡಿದೆ.

ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಯಾಗಿದೆ. ಜೊತೆಗೆ ಭಾರೀ ನೆರೆಯಿಂದ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರು ಹಾಗೂ ಎರಡು ಬೈಕ್‌’ಗಳು ಕೊಚ್ಚಿಹೋಗಿವೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, ಸ್ಥಳಿಯರಿಂದ ರಕ್ಷಣೆ ಕಾರ್ಯಚರಣೆ ಮುಂದುವರೆದಿದೆ.

ಮುದ್ರಾಡಿಯ ಹೊಸ ಕಂಬ್ಲದಲ್ಲಿ 1, ಕಾಂತರಬೈಲಿನಲ್ಲಿ 4, ಕೆಲಕಿಲದಲ್ಲಿ 3 ಮನೆಗಳು ಅರ್ಧದಷ್ಟು ಮುಳುಗಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಗ್ಗಕಟ್ಟಿ ಏಣಿಯ ಸಹಾಯದಿಂದ ಮನೆಮಂದಿಯನ್ನು ರಕ್ಷಿಸಿದ್ದಾರೆ.ಇನ್ನು ಪ್ರವಾಹದ ಕುರಿತು ಮಾಹಿತಿ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು, ‘ಅ.9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular