Friday, June 26, 2026
Homeಜಿಲ್ಲೆಉಡುಪಿ : ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ: ಡಿವೈಡರ್ ಮೇಲೇರಿದ ಬಸ್, ತಪ್ಪಿದ ಭಾರೀ ಅನಾಹುತ.

ಉಡುಪಿ : ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ: ಡಿವೈಡರ್ ಮೇಲೇರಿದ ಬಸ್, ತಪ್ಪಿದ ಭಾರೀ ಅನಾಹುತ.

ಉಡುಪಿ : ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಶಾಲಾ ಬಸ್‌ವೊಂದು ಗುರುವಾರ ಬೆಳಿಗ್ಗೆ ಮಣಿಪಾಲದ ಐನಾಕ್ಸ್ (ಸಿನಿಗ್ಯಾಲಕ್ಸಿ) ಮುಂಭಾಗ ಅಪಘಾತಕ್ಕೀಡಾಗಿ ಹೆದ್ದಾರಿಯ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ.

ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ ಕಡೆಗೆ ಸಾಗುವ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಮೇಲೇರಿ ನಿಂತಿದ್ದು, ಅಪಘಾತದ ರಭಸಕ್ಕೆ ತಡೆಬೇಲಿ ಹಾಗೂ ಬಸ್‌ನ ಮುಂಭಾಗಕ್ಕೆ ಹಾನಿಯಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸುರಕ್ಷಿತರಾಗಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.

ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಮಾಹಿತಿ ಪಡೆದ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular