Saturday, March 14, 2026
Flats for sale
Homeಜಿಲ್ಲೆಉಡುಪಿ : ಮನೆಗೆ ಬೆಂಕಿ ತಗುಲಿ ಉಡುಪಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಸಾವು,...

ಉಡುಪಿ : ಮನೆಗೆ ಬೆಂಕಿ ತಗುಲಿ ಉಡುಪಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಸಾವು, ಪತ್ನಿ ಗಂಭೀರ .

ಉಡುಪಿ : ನಗರದ ಮುಖ್ಯರಸ್ತೆಯಲ್ಲಿರುವ ಮನೆಯೊಂದು ಸೋಮವಾರ ಜು.15ರಂದು ಬೆಂಕಿಗೆ ಆಹುತಿಯಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​​ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉಡುಪಿ ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕರ ಮನೆಯಲ್ಲಿ ದುರ್ಘಟನೆ ನಡೆದಿದೆ. ಹೊತ್ತಿ ಉರಿಯುತ್ತಿದ್ದ ಮನೆಯ ಒಳಗೆ ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರಮಾನಂದ್ ಶೆಟ್ಟಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.

ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಶೆಟ್ಟಿಗೂ ಗಂಭೀರ ಸುಟ್ಟ ಗಾಯಗಳಾಗಿವೆ. ಇವರ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದ ದಂಪತಿಯನ್ನು ಅಗ್ನಿಶಾಮಕ ಸಿಬ್ಬಂದಿ ವಿನಾಯಕ್ ರಕ್ಷಿಸಿದ್ದರು. ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸಿದ್ದರು. ಬೆಂಕಿಯ ಜ್ವಾಲೆಗೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular