ಉಡುಪಿ ; ಮನುಷ್ಯನ ಜೀವನ ನೀರ ಮೇಲೆ ಗುಳ್ಳೆಯ ತರಹ.ಮೊನ್ನೆ ರಾತ್ರಿ ಮಲಗಿರುವ ವ್ಯಕ್ತಿಗಳು ಇಂದು ಇಲ್ಲವೆಂದರೆ ನಂಬಲಾಗದಂತಹ ಸಂಗತಿ.ಉಡುಪಿಯಲ್ಲಿ ಮುಂಜಾನೆ ಸಂಭವಿಸಿದ ಅಗ್ನಿದುರಂತದಲ್ಲಿ ಹೊಟೇಲ್ ಉದ್ಯಮಿ ಮೃತಪಟ್ಟಿದ್ದರು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅವರ ಪತ್ನಿ, ಬಿಜೆಪಿ ನಾಯಕಿ ಕೂಡ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾದ ಮಕ್ಕಳು ಅನಾಥರಾಗಿದ್ದಾರೆ. ಸೆಂಟ್ರಲೈಸ್ ಎಸಿ ಶಾರ್ಟ್ ಸರ್ಕ್ಯೂಟ್ ನಿಂದ ಬ್ಲಾಸ್ಟ್ ಆಗಿ ಅಗ್ನಿ ಅವಘಡ ಸಂಭವಿಸಿತ್ತು. ಎಸಿ ಶಾರ್ಟ್ ಸರ್ಕ್ಯೂಟ್ ಇಡೀ ಮನೆಯನ್ನು ಆಹುತಿ ಪಡೆದಿತ್ತು.
ಎಸಿ ಬ್ಲಾಸ್ಟ್ ಆದ ಮೇಲೆ ಬೆಂಕಿ ಕೆನ್ನಾಲೆಗೆ ಉಸಿರಾಡಲು ಸಾಧ್ಯವಾಗದೆ ರಮಾನಂದ್ ಶೆಟ್ಟಿ ಅವರ ಮೆದುಳು ಹಾಗೂ ಶ್ವಾಸಕೋಶ ಬ್ಲಾಕ್ ಆಗಿದೆ. ರಮಾನಂದ್ ಶೆಟ್ಟಿ ಮನೆಯಲ್ಲೇ ಸಾವನ್ನಪ್ಪಿದ್ದರೆ, ಅವರ ಪತ್ನಿ ಅಶ್ವಿನಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಬಂಗಲೆಯಲ್ಲಿದ್ದ ಮಕ್ಕಳಿಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಯಶಸ್ವಿ ಉದ್ಯಮಿಯಾಗಿದ್ದ ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಹೈಸ್ಕೂಲು ದಿನಗಳಿಂದಲೇ ಪ್ರೀತಿಸಿ ಮದುವೆಯಾಗಿದ್ದರು. ಅಪ್ಪಟ ಸನಾತನ ಸಂಸ್ಕಾರ ಪ್ರಿಯರಾಗಿದ್ದ ಅಶ್ವಿನಿ ಶೆಟ್ಟಿ, ಸಾಮಾಜಿಕ ಜಾಲತಾಣಗಳ್ಲಲಿ ರೀಲ್ಸ್ಗಳ ( ಬಲ್ಲಾಳ್ ಕಾಬೂಸ್-Ballal’s Caboose) ಮೂಲಕ ಹಿಂದೂ ಧರ್ಮ, ಸಂಸ್ಕೃತಿ, ಆಚಾರ ವಿಚಾರಗಳನ್ನು ಹೇಳುತ್ತಾ ತನ್ನದೇ ಅಭಿಮಾನಿ ಬಳಗವನ್ನು ಹೊಂದಿದ್ದರು. ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ಅವರು, ಸಾಮಾಜಿಕ ಕ್ಷೇತ್ರ, ಸಾಹಿತ್ಯ, ನೃತ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು.