ಉಡುಪಿ ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಯತ್ನಿಸಿದ್ದು ಪತಿ, ಪತ್ನಿ ಹಾಗೂ ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಂದಾಪುರ ತಾಲೂಕು ತೆಕ್ಕಟ್ಟೆಯಲ್ಲಿ ನಡೆದಿದೆ. ತಂದೆ ಮತ್ತು ಮಗ ಸಾವನಪ್ಪಿದ್ದು ಪತ್ನಿಯ ಸ್ಥಿತಿ ಗಂಭೀರವಾಗಿದೆ. ಗುರುವಾರ ಬೆಳಗಿನ ಜಾವ ಘಟನೆ ನಡೆದಿದೆ ಎಂದು ತಿಳಿದಿದೆ.
ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56),ಅವರ ಮಗ ಪ್ರಸಾದ್ ದೇವಾಡಿಗ(22) ಮೃತಪಟ್ಟವರು.
ಮಹಿಳೆ ತಾರಾ ದೇವಾಡಿಗ ಪರಿಸ್ಥಿತಿ ಗಂಭೀರವಾಗಿದ್ದು ಆಂಬುಲೆನ್ಸ್ ಸಹಾಯದಿಂದ ತತ್ ಕ್ಷಣವೇ ಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಮುಂಜಾನೆ ಮನೆಯ ಸಮೀಪದಲ್ಲಿರುವ ಬಾವಿಗೆ ಹಾರಿ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕುಂದಾಪುರದ ಅಗ್ನಿಶಾಮಕ ದಳದ ಕಾರ್ಯಾಚರಣೆ ನಡೆಸಿದ್ದು ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ.ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.
ತಂದೆ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾಯಿ, ತಾರಾ ದೇವಾಡಿಗ ಅವರು ಬಾವಿಗೆ ಹಾರಿದ್ದರು ಅವರ ಆಕ್ರಂದನದ ಧ್ವನಿ ಕೇಳಿದ ಸ್ಥಳೀಯರಿಂದ ಮಹಿಳೆಯರ ರಕ್ಷಣೆ ಮಾಡಿದ್ದಾರೆ.
ಸಾಲಭಾದೆಯಿಂದ ಸಾಮೂಹಿಕ ಆತ್ಮಹತ್ಯೆ ಯತ್ನ ಸಂಶಯ ವ್ಯಕ್ತವಾಗಿದ್ದು ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಕುಟುಂಬ ಮುಂದಾಗಿದ್ದಾರೆಂದು ತಿಳಿದುಬಂದಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.


