ಉತ್ತರ ಕನ್ನಡ : ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವನಪ್ಪಿದ ಘಟನೆ ವರದಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಘಟ್ಟ ಭಾಗದಲ್ಲಿ ನಡೆದಿದೆ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದು 15 ಮಂದಿ ಗಾಯಗೊಂಡಿದ್ದಾರೆಂದು ಮಾಹಿತಿ ದೊರೆತಿದೆ.
ಸವನೂರಿನಂದ ಕುಮುಟಕ್ಕೆ ತರಕಾರಿ ತುಂಬಿದ ಲಾರಿಯಲ್ಲಿ 25ಜನ ಪ್ರಯಾಣಿಸುತ್ತಿದ್ದರು.ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಾಲಿಯಾಗಿದ್ದು ಹಲವು ಸಾವು ನೋವು ಸಂಭವಿಸಿದೆ. ಮೃತರು ಹಾವೇರಿ ಜಿಲ್ಲೆ ಸವಣೂರು ಮೂಲದವರೆಂಬ ಮಾಹಿತಿ ದೊರೆತಿದೆ. ನಸುಕಿನ ಜಾವ ರಸ್ತೆಯಲ್ಲಿ ಮಂಜು ಮುಸುಕಿದ್ದರಿಂದ ಲಾರಿ ಪಲ್ಟಿಯಾಗಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


