ಮಂಗಳೂರು/ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ಗುರುವಾರ ಸಂಜೆ ನಡೆದ ಲಾವಣ್ಯ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ಪ್ರಕ್ರಿಯೆ ಪೂರ್ಣಗೊಂಡಿದೆ.
ಪೋಸ್ಟ್‌ಮಾರ್ಟಂ ಬಳಿಕ ಲಾವಣ್ಯ ಅವರ ಮೃತದೇಹವನ್ನು ಅವರ ಸ್ವಗ್ರಾಮವಾದ ಕಕ್ಯಪದವಿನ ಕೊಡಂಗೆ ನಿವಾಸಕ್ಕೆ ರವಾನೆ ಮಾಡಲಾಗಿದೆ. ಅಂತಿಮ ದರ್ಶನಕ್ಕಾಗಿ ಕುಟುಂಬಸ್ಥರು, ಬಂಧು-ಬಳಗ ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಗುರುವಾರ ಸಂಜೆ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಲಾವಣ್ಯ ಅವರ ಮೇಲೆ ಆರೋಪಿಯು ಹರಿತವಾದ ಆಯುಧದಿಂದ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.


