Saturday, July 25, 2026
Homeಜಿಲ್ಲೆಕಡಬ ; ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಸಾವು.

ಕಡಬ ; ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಸಾವು.

ಕಡಬ ; ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ಕಡಬದ ನೆಟ್ಟಣದಲ್ಲಿ ನಡೆದಿದೆ.

ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಜೀಪಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟ ಬಗ್ಗೆ ವರದಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular