Saturday, March 14, 2026
Flats for sale
Homeರಾಜ್ಯಕನಕಪುರ : ಅರಳಿಕೆರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸ್ಥಳದಲ್ಲೇ ಸಾವು.

ಕನಕಪುರ : ಅರಳಿಕೆರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸ್ಥಳದಲ್ಲೇ ಸಾವು.

ಕನಕಪುರ : ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಸಬಾ ಹೋಬಳಿ ಅರಳಿಕೆರೆ ಗ್ರಾಮದಲ್ಲಿ ನಡೆದಿದೆ.

ಕನಕಪುರ ತಾಲ್ಲೂಕು ಕಸಬಾ ಹೋಬಳಿ ಅರಳಿಕೆರೆ ಗ್ರಾಮದ ತಿಮ್ಮಪ್ಪ (60) ಆನೆ ದಾಳಿಗೆ ತುತ್ತಾದ ವ್ಯಕ್ತಿ.ಬೆಳಗಿನ ಜಾವ ಮೂರು ಗಂಟೆ ಸಮಯದಲ್ಲಿ ಗ್ರಾಮದ ಕೂಗಳತೆ ದೂರದಲ್ಲಿರುವ ರೇಷ್ಮೆ ತೋಟದ ಮನೆಯ ಬಳಿ ನಾಯಿಗಳು ಬೊಗಳುತ್ತಿವೆ ಎಂದು ನೋಡಲು ಹೋದಾಗ ಅಲ್ಲೇ ಇದ್ದ ಒಂಟಿ ಕಾಡಾನೆ ದಾಳಿಗೆ ತುತ್ತಾಗಿದ್ದಾರೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಕಾಡಾನೆಗಳ ಹಾವಳಿ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular