Friday, March 13, 2026
Flats for sale
Homeರಾಜಕೀಯಕಲಬುರಗಿ : ಕೆಕೆಆರ್‌ಡಿಬಿ ಅಧ್ಯಕ್ಷರ ನಿವಾಸದ ಹೊರಗೆ ಸೆಕ್ಯೂರಿಟಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.

ಕಲಬುರಗಿ : ಕೆಕೆಆರ್‌ಡಿಬಿ ಅಧ್ಯಕ್ಷರ ನಿವಾಸದ ಹೊರಗೆ ಸೆಕ್ಯೂರಿಟಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.

ಕಲಬುರಗಿ : ಜೇವರ್ಗಿ ಶಾಸಕ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ 37 ವರ್ಷದ ಸೆಕ್ಯೂರಿಟಿ ಗುರುವಾರ ಶರಣನಗರದಲ್ಲಿರುವ ತಮ್ಮ ನಿವಾಸದ ಹೊರಗಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತನನ್ನು ದೇವೇಂದ್ರ ಪಟ್ಟೇದಾರ್ (29) ಎಂದು ಗುರುತಿಸಲಾಗಿದ್ದು, ಕಳೆದ 4-5 ವರ್ಷಗಳಿಂದ ಕಾಂಗ್ರೆಸ್ ಮುಖಂಡನ ಮನೆಯಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ. ಬುಧವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶಾಸಕರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಡುಗೆಯವರು ಇದನ್ನು ಗಮನಿಸಿ ತಕ್ಷಣ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು, ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ದೇವೇಂದ್ರ ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿ,ದೇವೇಂದ್ರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದು, ಬೆಳಗ್ಗೆ 5.30ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ವಿಧಿವಿಜ್ಞಾನ ಪ್ರಯೋಗಾಲಯ ತಂಡ ಮತ್ತು ಹಿರಿಯ ಅಧಿಕಾರಿಗಳು ಆತ್ಮಹತ್ಯೆ ಸ್ಥಳದ ಪರಿಶೀಲನೆ ನಡೆಸಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular