ಕಲಬುರಗಿ : ಚಲಿಸುತ್ತಿದ್ದ ಕೆಕೆಆರ್ಟಿಸಿ ಬಸ್ನ ಮುಂಭಾಗದ ಟೈರ್ ಏಕಾಏಕಿ ಸ್ಪೋಟಗೊಂಡ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಆತನೂರ್ ಗ್ರಾಮದ ಬಳಿ ನಡೆದಿದೆ.


ಚಿತ್ತಾಪುರ ಸಾರಿಗೆ ಘಟಕಕ್ಕೆ ಸೇರಿದ ಬಸ್ ವಿಜಯಪುರ ಮುಗಳಖೋಡ್ ಮಾರ್ಗವಾಗಿ ಅಫಜಲಪುರದತ್ತ ಸಂಚರಿಸುತ್ತಿದ್ದ ವೇಳೆ ಟೈರ್ ಸ್ಪೋಟಗೊಂಡಿದೆ. ಪರಿಣಾಮ ಬಸ್ ನಿಯಂತ್ರಣ ತಪ್ಪಿ ಪಕ್ಕಕ್ಕೆ ವಾಲಿದೆ. ಆದರೆ ಚಾಲಕನ ಸಮಯಪ್ರಜ್ಞೆಯಿಂದ ಬಸ್ನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ಅಪಾಯವಿಲ್ಲದೆ ಪ್ರಯಾಣಿಕರು ಪಾರಾಗಿದ್ದಾರೆ.
ಘಟನೆಯ ಬಳಿಕ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದು, ಹಳೆಯ ಬಸ್ಗಳ ಬದಲು ಹೊಸ ಹಾಗೂ ಸುಸ್ಥಿತಿಯ ಬಸ್ಗಳನ್ನು ಸಂಚಾರಕ್ಕೆ ಬಿಡುವಂತೆ ಸಾರಿಗೆ ಇಲಾಖೆಗೆ ಒತ್ತಾಯಿಸಿದ್ದಾರೆ.

