Thursday, July 23, 2026
Homeರಾಜ್ಯಕಲಬುರಗಿ : ಪಿಯು ವಿದ್ಯಾರ್ಥಿಯ ಪರೀಕ್ಷೆ ಬರೆದ ಕಾಂಗ್ರೆಸ್ ಕರ‍್ಯಕರ್ತೆಯ ಬಂಧನ.!

ಕಲಬುರಗಿ : ಪಿಯು ವಿದ್ಯಾರ್ಥಿಯ ಪರೀಕ್ಷೆ ಬರೆದ ಕಾಂಗ್ರೆಸ್ ಕರ‍್ಯಕರ್ತೆಯ ಬಂಧನ.!

ಕಲಬುರಗಿ : ನೈಜವಾದ ವಿದ್ಯಾರ್ಥಿಯ ಬದಲಿಗೆ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆದಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣ ಪಾಟೀಲ್ ಅವರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ ನಡೆದಿದೆ.

ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾರ್ಚ್ ೫ ರಂದು ರಾಜ್ಯಶಾಸ್ತç ಪರೀಕ್ಷೆ ನಡೆದಿತ್ತು. ಕಲಬುರಗಿ ನಗರದ ಖರ್ಗೆ ಕುಟುಂಬದ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ಈ ಬಾರಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿಯೂ ಆಗಿರುವ ಸಂಪೂರ್ಣ ಪಾಟೀಲ್ ಪರೀಕ್ಷೆ ಬರೆದಿದ್ದಾರೆ.

ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ ತೆರಳಿ ಅಕ್ರಮವನ್ನು ಪ್ರಶ್ನಿಸಿದಾಗ ಬದಲಿ ಅಭ್ಯರ್ಥಿಯೊಬ್ಬರು ಪರೀಕ್ಷೆ ಬರೆದಿರುವುದು ಬೆಳಕಿಗೆ ಬಂದಿದೆ. ಸದ್ಯ ಮಿಲಿಂದ್ ಶಾಲೆಯ ಪ್ರಾಂಶುಪಾಲರು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ ಪೊಲೀಸರು ಸಂಪೂರ್ಣ ಪಾಟೀಲ್ ಅವರನ್ನು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular