ಕಲಬುರಗಿ : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದೊಡ್ಡ ಹಗರಣ ಹಗರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಎಸ್ಟಿ ಬೋರ್ಡ್ನಲ್ಲಿ ದೊಡ್ಡ ಹಗರಣವೊಂದು ನಡೆದಿರುವುದು ನಿನ್ನೆ ಬೆಳಕಿಗೆ ಬಂದಿದೆ. ಆ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಇಲಾಖೆಯ ಸಚಿವ ನಾಗೇಂದ್ರರನ್ನು ವಜಾ ಮಾಡಬೇಕು. ಇಲ್ಲವಾದಲ್ಲಿ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಕಲಬುರಗಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು ನಿಜವಾಗಿಯೂ ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್. ಕೂಡಲೆ ಸಿಎಂ ಸಿದ್ದರಾಮಯ್ಯ ಆ ಇಲಾಖೆಯ ಸಚಿವರನ್ನು ಮಂತ್ರಿ ಮಂಡಲದಿಂದ ಕೈ ಬಿಡಬೇಕು ಎಂದರು.ಓರ್ವ ಇಂಜಿನಿಯರ್ ಸುಸೈಡ್ ಮಾಡಿಕೊಂಡಿದ್ದಾನೆ,ಎಲ್ಲಿ ಹೋಯಿತು ನಿಮ್ಮ ಭ್ರಷ್ಟಚಾರ ತಡೆ ನಿಲುವು, ಡೆತ್ನೋಟ್ನಲ್ಲಿ ಕೆಲ ಉನ್ನತ ಅಧಿಕಾರಿಗಳ ಹೆಸರು ಹೇಳಲಾಗಿದೆ,ಸಿಟಿಂಗ್ ಹೈಕೋರ್ಟ್ ಜಡ್ಜ್ರಿಂದ ಉನ್ನತಮಟ್ಟದ ತನಿಖೆ ನಡೆಸಲೇಬೇಕು ಹಾಗೂ ಈ ಘಟನೆ ಸಂಬಂಧ ಸಚಿವ ನಾಗೇಂದ್ರರನ್ನ ಮಂತ್ರಿ ಮಂಡಲದಿಂದ ಕೈಬಿಡಬೇಕು ಇಲ್ಲದಿದ್ದರೆ ರಾಜ್ಯದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು, ಇದನ್ನ ನೋಡಿ ಕೈಕಟ್ಟಿ ಸುಮ್ಮನೆ ಕುಳಿತುಕೊಳ್ಳೊಕೆ ಆಗಲ್ಲ, ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿತ್ತು. ಇದಕ್ಕೆ ಪೂರಕ ಅಂಶಗಳು ಅವರು ಬರೆದಿಟ್ಟಿದ್ದ ಡೆತ್ನೋಟ್ನಲ್ಲಿತ್ತು ಎಂದು ಅವರು ಹೇಳಿದ್ದಾರೆ.


