Thursday, July 30, 2026
Homeರಾಜ್ಯಕಲಬುರಗಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ.

ಕಲಬುರಗಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ.

ಕಲಬುರಗಿ : ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಬೆಳಗಿನ ಉಪಹಾರ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಉಪಹಾರ ಸೇವಿಸಿದ ಕೆಲವೇ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಸೇರಿದಂತೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವೈದ್ಯರು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಕಳಪೆ ಆಹಾರ ಅಥವಾ ಕಲುಷಿತ ಕುಡಿಯುವ ನೀರು ಸೇವನೆಯಿಂದ ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಅಸ್ವಸ್ಥತೆಗೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಲೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳು ಸೇವಿಸಿದ ಆಹಾರ ಹಾಗೂ ಕುಡಿಯುವ ನೀರಿನ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಅಸ್ವಸ್ಥತೆಗೆ ನಿಖರ ಕಾರಣ ತಿಳಿಯಲಿದೆ. ಈ ಘಟನೆ ಹಿನ್ನೆಲೆಯಲ್ಲಿ ಶಾಲೆಯಲ್ಲಿನ ಆಹಾರದ ಗುಣಮಟ್ಟ ಹಾಗೂ ಕುಡಿಯುವ ನೀರಿನ ಸುರಕ್ಷತೆ ಕುರಿತು ತನಿಖೆ ಆರಂಭಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular