Tuesday, June 2, 2026
Flats for sale
Homeರಾಜ್ಯಕಲಬುರಗಿ : ಹಿಜಾಬ್ ವಿವಾದಕ್ಕೆ ಪ್ರತಿಯಾಗಿ ಕಾಲೇಜುಗಳಲ್ಲಿ ಕೇಸರಿ ಶಾಲು ವಿತರಣೆ.

ಕಲಬುರಗಿ : ಹಿಜಾಬ್ ವಿವಾದಕ್ಕೆ ಪ್ರತಿಯಾಗಿ ಕಾಲೇಜುಗಳಲ್ಲಿ ಕೇಸರಿ ಶಾಲು ವಿತರಣೆ.

ಕಲಬುರಗಿ : ರಾಜ್ಯ ಸರ್ಕಾರ ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿರುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಕಲಬುರಗಿಯಲ್ಲಿ ಕೆಲವು ಹಿಂದೂಪರ ಸಂಘಟನೆಗಳು ಕೇಸರಿ ಶಾಲು ವಿತರಣೆ ಅಭಿಯಾನ ಆರಂಭಿಸಿವೆ. ನಗರದ ಶರಣಬಸವೇಶ್ವರ ಕಾಲೇಜು ಆವರಣದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ವಿತರಿಸಿದರು.

ಹಿಜಾಬ್‌ಗೆ ಅನುಮತಿ ನೀಡಿರುವ ಸರ್ಕಾರದ ಕ್ರಮದ ವಿರುದ್ಧ ಈ ಅಭಿಯಾನ ನಡೆಸಲಾಗುತ್ತಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಲ್ಲೂ ಇದೇ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಸಂಘಟನೆಗಳು ಸೂಚನೆ ನೀಡಿವೆ. ಹಿಜಾಬ್ ವಿಚಾರವಾಗಿ ರಾಜ್ಯದಲ್ಲಿ ಮತ್ತೆ ಚರ್ಚೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಈ ಬೆಳವಣಿಗೆ ಗಮನ ಸೆಳೆದಿದೆ.ಈ ಕುರಿತು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ಸಂಬಂಧಿತ ಅಧಿಕಾರಿಗಳ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular