ಕಲ್ಲಡ್ಕ : ಕಲ್ಲಡ್ಕ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಕ್ಟೋಬರ್ 12, ಗುರುವಾರ ಸಂಜೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದು ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ. ವೀರಕಂಭದ ಪಾವನಾ (23) ಮೃತ ಮಹಿಳೆ. ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಕೆಲಸ ಮಾಡಿಕೊಂಡು ಮನೆಗೆ ಮರಳುತ್ತಿದ್ದಳು. ಆಗಷ್ಟೇ ಬಸ್‌ನಿಂದ ಇಳಿದು ಮನೆಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಕಾರು ವೇಗವಾಗಿ ಬಂದ ಕಾರು ಯುವತಿಗೆ ಡಿಕ್ಕಿ ಹೊಡೆದಿದೆ . ಬಳಿಕ ಅತಿ ವೇಗದ ಕಾರಣ ಕಾರು ಪಲ್ಟಿಯಾಗಿದೆ.


