Friday, March 13, 2026
Flats for sale
Homeಜಿಲ್ಲೆಕಾಸರಗೋಡು : ಮನೆಯ ಸಮೀಪದ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಗಂಟಲಿನಲ್ಲಿ ಸಿಲುಕಿ ವ್ಯಕ್ತಿ ಸಾವು..!

ಕಾಸರಗೋಡು : ಮನೆಯ ಸಮೀಪದ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಗಂಟಲಿನಲ್ಲಿ ಸಿಲುಕಿ ವ್ಯಕ್ತಿ ಸಾವು..!

ಕಾಸರಗೋಡು : ಬದಿಯಡ್ಕದಲ್ಲಿ ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನದ ನಿವಾಸಿ ಮತ್ತು ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ ವಿನ್ಸೆಂಟ್ ತನ್ನ ಮನೆಯ ಸಮೀಪದ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ಘಟನೆ ನಡೆದಿದೆ. ಆಹಾರವು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಅವರು ತೊಂದರೆ ಅನುಭವಿಸಿದ್ದಾರೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಕುಂಬ್ಳೆ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ವೈದ್ಯರು ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ .

ವಿನ್ಸೆಂಟ್ ಬೇಲ ಕಟ್ಟತಂಗಡಿಯ ವೆಲ್ಡಿಂಗ್ ಅಂಗಡಿಯಲ್ಲಿ ಉದ್ಯೋಗಿಯಾಗಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ, ಶವವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಮೃತರು ಅವಿವಾಹಿತರಾಗಿದ್ದು ಬದಿಯಡ್ಕ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular