Friday, March 13, 2026
Flats for sale
Homeರಾಜ್ಯಕೊಪ್ಪಳ : ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್.

ಕೊಪ್ಪಳ : ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್.

ಕೊಪ್ಪಳ : ಗಂಗಾವತಿ ನಗರದ ಹೃದಯ ಭಾಗದಲ್ಲಿರುವ ಕಟ್ಟಡದಲ್ಲಿ ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಜ್ಯುವೆಲ್ಲರಿ ಶಾಪ್​ಗೆ ಬೆಂಕಿ ತಗುಲಿ ಅಪಾರ ಮೌಲ್ಯದ ಚಿನ್ನಾಭರಣ, ವಸ್ತು ನಾಶವಾದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿರುವ ಕೆ.ಜೆ.ಪಿ ಜ್ಯುವೆಲ್ಲರಿ ಶಾಪ್​ನಲ್ಲಿ ಸಂಭವಿಸಿದೆ. ನೋಡು ನೋಡುತ್ತಿದ್ದಂತಯೇ ಬೆಂಕಿಯ ಕೆನ್ನಾಲೆಗೆ ಮೂರು ಅಂತಸ್ತಿನ ಕಟ್ಟಡ ಸಂಪೂರ್ಣ ಹೊತ್ತಿ ಉರಿದಿದೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು ಗಂಗಾವತಿ ನಗರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಘಟನೆ ನಡೆದಿದೆ.

ಬೆಂಕಿ ನಂದಿಸಲು ಹರಸಾಹಸ ಪಡುತಿದ್ದು ಶಾರ್ಟ್ ಸರ್ಕ್ಯೂಟ್ ನಿಂದಲೇ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಜನನಿಬಿಡ ಪ್ರದೇಶವಾಗಿದ್ದ ಗಣೇಶ ವೃತ್ತದಲ್ಲಿ ಶಾಪ್ ಇರುವುದರಿಂದ ಭಾರೀ ಅವಘಡ ಸಂಭವಿಸುವ ಸಾಧ್ಯತೆ ಇತ್ತು. ಸದ್ಯ ಮಧ್ಯರಾತ್ರಿ ಘಟನೆ ನಡೆದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಒಟ್ಟು ಮೂರು ಮಹಡಿಯಲ್ಲಿರುವ ಕೆಜೆಪಿ ಚಿನ್ನಾಭರಣ ಮತ್ತು ಬಟ್ಟೆ ಅಂಗಡಿಗಳಿಗೆ ಬೆಂಕಿ ತಗುಲಿದೆ. ರಾತ್ರಿ ಹನ್ನೆರಡು ಗಂಟೆಯಿಂದ ಬೆಂಕಿ ನಂದಿಸಲಾಗುತ್ತಿದೆ. ಸತತ ಏಳು ಗಂಟೆಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಹನ್ನೆರಡಕ್ಕೆ ಹರಡಿದ ಬೆಂಕಿಯ ಕೆನ್ನಾಲಿಗೆ ಸುಮಾರು ನಾಲ್ಕು ಗಂಟೆಯಾ ವರೆಗೂ ಹರಡಿತ್ತು ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular