Saturday, March 14, 2026
Flats for sale
Homeರಾಜ್ಯಕೋಲಾರ : ಮಕ್ಕಳಿಂದ ಶೌಚಾಲಯ ಸ್ವಚ್ಛ ಗೊಳಿಸಿದ ಶಿಕ್ಷಕರು,ವಿಡಿಯೋ ವೈರಲ್ .

ಕೋಲಾರ : ಮಕ್ಕಳಿಂದ ಶೌಚಾಲಯ ಸ್ವಚ್ಛ ಗೊಳಿಸಿದ ಶಿಕ್ಷಕರು,ವಿಡಿಯೋ ವೈರಲ್ .

ಕೋಲಾರ : ಈಗಿನ ಶಾಲೆಯ ಶಿಕ್ಷಕರಿಗೆ ಏನಾಗೋತ್ತೋ ಗೊತ್ತಿಲ್ಲ.ರಾಜ್ಯದಲ್ಲಿ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛ ಗೊಳಿಸಿದ ಸುದ್ದಿ ಮತ್ತೊಮ್ಮೆ ವರದಿಯಾಗಿದೆ ಕೋಲಾರದಲ್ಲಿ ವಿದ್ಯಾರ್ಥಿಗಳನ್ನುಮಲದ ಗುಂಡಿಗೆ ಇಳಿಸಿ ಸ್ವಚ್ಫ ಮಾಡಿಸಿದ ಅಮಾನವೀಯ ಘಟನೆ ಮಾಸುವ ಮುನ್ನವೇ ಪಕ್ಕದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೊಂದು ಅಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ.

ಶಿಢ್ಲಘಟ್ಟ ತಾಲೂಕು ಕುದುಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯವನ್ನು ಸ್ವಚ್ಛಗೊಳಿಸಿರುವ ವಿಡಿಯೋ ವೈರಲ್ ಆಗಿದೆ. ಅಧಿಕಾರಿಗಳ ತಂಡ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಹೇಳಿಕೆ ಪಡೆದು ಪರಿಶೀಲಿಸಿದೆ.

ಈ ವೇಳೆ ಮಕ್ಕಳ ಪೋಷಕರು ಪ್ರಭಾರಿ ಶಾಲಾ ಮುಖ್ಯ ಶಿಕ್ಷಕಿ ಬಿ. ರೇಣುಕಮ್ಮ ವಿರುದ್ಧ ತಿರುಗಿಬಿದ್ದಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಅಧಿಕಾರಿಗಳು ಅವರನ್ನು ಅಮಾನತು ಮಾಡಿದ್ದಾರೆ. ಕಳೆದ ತಿಂಗಳಷ್ಟೇ ಮಾಲೂರು ತಾಲೂಕಿನ ಯಲವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರು ಮಕ್ಕಳಿಂದ ಮಲದ ಗುಂಡಿ ಸ್ವಚ್ಫ ಮಾಡಿಸುತ್ತಿದ್ದ ಫೋಟೋ, ವಿಡಿಯೋ ವೈರಲ್ ಆಗಿತ್ತು. ಪ್ರಾಂಶುಪಾಲರು, ಮೂವರು ಶಿಕ್ಷಕರು, ವಾರ್ಡನ್ ಅವರನ್ನು ಬಂಧಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular