Friday, November 22, 2024
Flats for sale
Homeರಾಜಕೀಯಗಂಗಾವತಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರನ್ನು ಭೇಟಿ ಮಾಡಿ ರಾಜಕೀಯ ವಿದ್ಯಮಾನಗಳ ಬಗ್ಗೆ...

ಗಂಗಾವತಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರನ್ನು ಭೇಟಿ ಮಾಡಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ ಗಾಳಿ ಜನಾರ್ಧನ ರೆಡ್ಡಿ.

ಗಂಗಾವತಿ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿರುವ ಗಂಗಾವತಿ ಶಾಸಕ ಹಾಗೂ ಬಿಜೆಪಿಯ ರಾಜ್ಯ ಮುಖಂಡ ಜಿ. ಜನಾರ್ದನರೆಡ್ಡಿ, ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ರಾಜಕೀಯದ ಹಲವು ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದಾರೆ

ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದಶರ್ಿ ಬಿ.ಎಲ್. ಸಂತೋಷ್ ಅವರ ಆಹ್ವಾನದ ಮೇರೆಗೆ ದೆಹಲಿಗೆ ಹೋಗಿದ್ದ ರೆಡ್ಡಿ, ಬಿಜೆಪಿ ಪಕ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಭಾಗಿಯಾಗಿ ರಾಷ್ಟ್ರೀಯ ಅಧ್ಯಕ ನಡ್ಡಾರನ್ನು ಸನ್ಮಾನಿಸಿ ಗೌರವಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜನಾರ್ದನರೆಡ್ಡಿ, ಕನರ್ಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಎಲ್ಲಾ ನಾಯಕರು ಸಾಮೂಹಿಕ ಶ್ರಮ ವಹಿಸಿ ಅತಿಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಅಭ್ಯಥರ್ಿಗಳನ್ನು ಗೆಲ್ಲಿಸಿಕೊಂಡು ಬರಬೇಕು. ಈ ಮೂಲಕ ಮೋದಿ ಅವರನ್ನು ಪ್ರಧಾನಿಯನ್ನಾಗಿಸಬೇಕು ಎಂಬ ಗುರಿ ನೀಡಿದ್ದಾರೆ.

ರಾಜ್ಯದ ಯಾವ ಕ್ಷೇತ್ರದಲ್ಲಿ ಬಿಜೆಪಿ ಹೆಚ್ಚು ಬಲೀಷ್ಠವಾಗಿದೆ, ಎಲ್ಲಿ ಬಲಹೀನವಾಗಿದೆ ಎಂಬ ಟೆಕ್ನಿಕಲ್ ರೀಪೋಟರ್್ ಕಾಡರ್್ ಸಮೇತ ಮಾಹಿತಿ ನೀಡಿರುವ ನಡ್ಡಾ, ಬಲಹೀನವಾಗಿರುವ ಕ್ಷೇತ್ರದಲ್ಲಿ ಯಾವ ಸ್ಟ್ಯಾಟಜರ್ಿ ಮಾಡಬೇಕು ಎಂಬ ಮಾಹಿತಿ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಸೇರಿದಂತೆ ಪಕ್ಷದ ಆಯಾ ಭಾಗದ ಪ್ರಮುಖರ ನೇತೃತ್ವದಲ್ಲಿ ಪ್ರಚಾರ ಕೈಗೊಳ್ಳಬೇಕು ಎಂದು ನಡ್ಡಾ ಸೂಚನೆ ನೀಡಿದ್ದಾರೆ ಎಂದು ಶಾಸಕ ರೆಡ್ಡಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular