Friday, July 10, 2026
Homeಕ್ರೈಂಗದಗ : ಅಮಾನವೀಯ ಕೃತ್ಯ : ಬುದ್ಧಿಮಾಂದ್ಯ ಯುವತಿ ಮೇಲೆ ನಿರಂತರ ಅತ್ಯಾಚಾರ; 6 ತಿಂಗಳ...

ಗದಗ : ಅಮಾನವೀಯ ಕೃತ್ಯ : ಬುದ್ಧಿಮಾಂದ್ಯ ಯುವತಿ ಮೇಲೆ ನಿರಂತರ ಅತ್ಯಾಚಾರ; 6 ತಿಂಗಳ ಗರ್ಭಿಣಿ, ವಿಡಿಯೋ ವೈರಲ್ ಶಂಕೆ.

ಗದಗ : ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಬುದ್ಧಿಮಾಂದ್ಯ ಯುವತಿಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ ಆರು ತಿಂಗಳ ಗರ್ಭಿಣಿಯಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಪ್ರಕರಣವು ರೋಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಾಹಿತಿಯ ಪ್ರಕಾರ, ಚಾಕೊಲೇಟ್ ಹಾಗೂ ತಿಂಡಿ ಆಸೆ ತೋರಿಸಿ ಯುವತಿಯನ್ನು ನಿರಂತರವಾಗಿ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಲಾಗಿದೆ ಎನ್ನಲಾಗಿದೆ. ಯುವತಿಯ ದೇಹದಲ್ಲಿ ಬದಲಾವಣೆ ಕಂಡುಬಂದ ಬಳಿಕ ಗ್ರಾಮಸ್ಥರಿಗೆ ವಿಷಯ ತಿಳಿದು, ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಲಾಗಿದೆ. ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಯುವತಿ ಆರು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಅದೇ ಗ್ರಾಮದ ದುರ್ಗಪ್ಪ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರ ಪಾತ್ರವಿರಬಹುದೆಂಬ ಶಂಕೆಯನ್ನೂ ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇದಲ್ಲದೆ, ಅತ್ಯಾಚಾರದ ವಿಡಿಯೋ ಗ್ರಾಮದಲ್ಲಿ ಕೆಲವರ ಮೊಬೈಲ್‌ಗಳಲ್ಲಿ ವೈರಲ್ ಆಗಿತ್ತು ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ಬಹಿರಂಗವಾದ ಬಳಿಕ ವಿಡಿಯೋ ಅಳಿಸಲಾಗಿದೆ ಎನ್ನಲಾಗಿದೆ. ವಿಡಿಯೋ ಪತ್ತೆ ಹಾಗೂ ಅದರ ಸತ್ಯಾಸತ್ಯತೆ ಕುರಿತು ರೋಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಸ್ತುತ ಸಂತ್ರಸ್ತೆಯನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆಶ್ರಯ ನೀಡಲಾಗಿದ್ದು, ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ. ಅಧಿಕೃತ ತನಿಖೆಯ ಬಳಿಕವೇ ಆರೋಪಗಳ ಬಗ್ಗೆ ಅಂತಿಮ ಸ್ಪಷ್ಟತೆ ದೊರೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular