ಗದಗ : ಜಿಲ್ಲೆಯ ನರೇಗಲ್ ಪಟ್ಟಣದ ಹೊರವಲಯದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಟಾಟಾ ಸುಮೊ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನಪ್ಪಿದ ಘಟನೆ ನಡೆದಿದೆ.
ಈ ಭೀಕರ ಅಪಘಾತದಲ್ಲಿ ಐದು ಜನ ಸಾವನ್ನಪ್ಪಿದ್ದು, ನಾಲ್ವವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ. ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಫಜಲಪುರದ ಸಚಿನ್ ಕತ್ತಿ 31, ದ್ರಾಕ್ಷಾಯಣಿ ಕತ್ತಿ-30 ಹಾಗೂ ಮಾದನ ಹಿಪ್ಪರಗಿಯ ಶಿವಕುಮಾರ್ ಕಲಶೆಟ್ಟಿ 50, ಚಂದ್ರಕಲಾ 42, ರಾಣಿ-32 ಮೃತರು.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದಿಂದ ಟಾಟಾ ಸೊಮೊನಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಆದ್ರೆ, ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡಿದರು.


