Sunday, May 31, 2026
Flats for sale
Homeರಾಜ್ಯಚಿಕ್ಕಬಳ್ಳಾಪುರ : ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವು.

ಚಿಕ್ಕಬಳ್ಳಾಪುರ : ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವು.

ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಟೋ, ಥಾರ್ ಕಾರು ಹಾಗೂ ಕಂಟೇನರ್ ನಡುವೆ ಈ ದುರ್ಘಟನೆ ನಡೆದಿದೆ. ಪೆರೇಸಂದ್ರದಿಂದ ಬಾಗೇಪಲ್ಲಿ ಕಡೆಗೆ ತೆರಳುತ್ತಿದ್ದ ಆಟೋ, ರಸ್ತೆ ಬದಿಯಲ್ಲಿ ನಿಂತಿದ್ದ ಕಂಟೇನರ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಸರಣಿ ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಆಟೋದಲ್ಲಿ ಒಟ್ಟು ಎಂಟು ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಉಳಿದ ಮೂವರನ್ನು ಚಿಕಿತ್ಸೆಗಾಗಿ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular