ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕಳೆದೊಂದು ತಿಂಗಳಲ್ಲಿ ಮಹಾಮಾರಿ ಡೆಂಘೀ ಜ್ವರ ಕಾಣಿಸಿಕೊಂಡಿದ್ದರೂ ಆರೋಗ್ಯ ಇಲಾಖೆ ಮಾತ್ರ ಗಂಭೀರವಾಗಿ ಕ್ರಮ ಕೈಗೊಳ್ಳದೇ ಸಾರ್ವಜನಿಕರ ಸಾವಿಗೆ ಕಾರಣವಾಗುತ್ತಿದೆ. ಇಂದು ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ಶಂಕಿತ ಡೆಂಘೀಗೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ದ್ವಿತೀಯ ಪಿಯುಸಿಯಲ್ಲಿ ಶೇ 95% ಅಂಕ ಪಡೆದುಕೊಂಡಿದ್ದ ಯಶಸ್ವಿನಿ ಮೃತ ವಿದ್ಯಾರ್ಥಿನಿ. ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಮೃತ ಯಶಸ್ವಿನಿ ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು ಹೀಗಾಗಿ ಆಕೆಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಯಶಸ್ವಿನಿ ಮೃತಪಟ್ಟಿದ್ದಾಳೆ.