ಚಿಕ್ಕಬಳ್ಳಾಫುರ : ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದು ಬಿಜೆಪಿ ಗೆ ಪಕ್ಷಾಂತರ ಗೊಂಡು ನಂತರ ಬಿಜೆಪಿಯಿಂದ ಗೆದ್ದು ಸಚಿವರಾಗಿ ನಂತರದ ಚುನಾವಣೆಯಲ್ಲಿ ಸೋತ ಬಳಿಕ ಮಾಜಿ ಸಚಿವ ಡಾ.ಕೆ ಸುಧಾಕರ್ ಪಕ್ಷದ ಚಟುವಟಿಕೆಗಳಲ್ಲಿ ಅಷ್ಟೊಂದು ಆಕ್ಟಿವ್ ಆಗಿ ಇರಲ್ಲಿಲ್ಲ. ಆದರೆ ಕೆ. ಸುಧಾಕರ್ ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ದೆಹಲಿ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿದ ಬಳಿಕ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಮಿಂಚಿನ ಸಂಚಾರ ಆರಂಭಿಸಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನೂ 2-3 ತಿಂಗಳು ಬಾಕಿ ಇದ್ದು, ಈಗಾಗಲೆ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.ಈ ಬಾರಿ ಮಾಡು ಇಲ್ಲವೇ ಮಡಿ ಎಂಬಂತೆ ಬಾಯಿ ಮಾತಲ್ಲಿ ಗೆದ್ದ ಪ್ರದೀಪ್ ಈಶ್ವರ್ ವಿರುದ್ಧ ತೊಡೆ ತಟ್ಟಲು ಹಾಗೂ ಮೋದಿಜಿಯ ಹೆಸರಿನಲ್ಲಿ ಮತ್ತೊಮ್ಮೆ ರಾಜಕೀಯಕ್ಕೆ ಕಾಲಿಡಲು ಪ್ರಯತ್ನಮಾಡುತ್ತಿದ್ದಾರೆ.
ಪ್ರಚಾರದ ವೇಳೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವರಿಷ್ಠರು ಸಮ್ಮತಿಸಿದ್ದು ದೇವಮೂಲೆಯಾದ ಚೇಳೂರು ತಾಲೂಕಿನ ಆರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ರಾಶ್ಚರವು, ಚಾಕವೇಲು, ಸಜ್ಜಲವಾರಪಲ್ಲಿ ನಲ್ಲಗುಟ್ಲಪಲ್ಲಿ ಗಂಗಮ್ಮ ಬೆಟ್ಟ, ಪಾಳ್ಯಾಕೆರೆ ಗ್ರಾಮಗಳಿಂದ ಇಂದು ಚುನಾವಣಾ ಪ್ರಚಾರ ನಡೆಸಿದರು.
ಕೆ. ಸುಧಾಕರ್ ಅಂದರೆ ಅಭಿವೃದ್ಧಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ತಮ್ಮ ಪಾತ್ರವೂ ಇದೆ ,ನನ್ನ ಸ್ಪರ್ಧೆಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಹೆಚ್ಡಿ ಕುಮಾರಸ್ವಾಮಿ ಸಮ್ಮತಿಸಿದ್ದಾರೆ. ಒಬ್ಬ ಸಂಸದ ಏನು ಮಾಡಬಹುದೆಂದು ತೋರಿಸುತ್ತೇನೆ ಎಂದು ಹೇಳಿದ್ದಾರೆ.ದೇಶ ಅಭಿವೃದ್ಧಿಯಾಗಬೇಕು ಅಂದರೆ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಟಿಬಿ ನಾಗರಾಜ್, ನಾನು ರಿಸ್ಕ್ ತೆಗೆದುಕೊಂಡು ಬಿಜೆಪಿ ಸೇರಿದ್ದೆವು. ಆದರೆ, ನಮ್ಮ ತ್ಯಾಗಕ್ಕೆ ವಿಧಾನಸಭಾ ಚುನಾವಣೆಯಲ್ಲಿ ಅನ್ಯಾಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹಾಲಿ ಸಂಸದ ಬಚ್ಚೇಗೌಡರು ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿಲ್ಲ.ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದ ಪುತ್ರ ಶರತ್ಗೆ ಬೆಂಬಲಿಸಿದ್ದರು ಪ್ರಸ್ತುತ ಶಾಸಕರಾಗಿರುವುದರಿಂದ ಹಾಗೂ ಬಿಜೆಪಿ ಪಕ್ಷದಲ್ಲಿ ಹೆಚ್ಚಾಗಿ ಗುರುತಿಸಿಕೊಳ್ಳದ ಕಾರಣ ಈ ಬಾರಿ ಒಂದು ಅವಕಾಶ ಸಿಗಬಹುದೆನ್ನುದು ನಂಬಿಕೆ.ಹೀಗಾಗಿ ಅವರಿಗೆ ಈ ಬಾರಿ ಟಿಕೆಟ್ ಕಟ್ ಆಗುವುದು ಪಕ್ಕಾ ಆಗಿದೆ. ಹೀಗಾಗಿ ತಯಾರಾಗುವಂತೆ ಸುಧಾಕರ್ಗೆ ಸೂಚನೆಗ ಬಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.


