ಚಿಕ್ಕಮಗಳೂರು : ರಾಜ್ಯದಲ್ಲಿ ಲವ್ ಜಿಹಾದ್ ನಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಅಲ್ಲಲ್ಲಿ ವರದಿಯಾಗುತ್ತ ಇದೆ. ಲವ್ ಜಿಹಾದ್ ಆರೋಪಿಸಿ ನೈತಿಕ ಪೊಲೀಸ್ ಗಿರಿ ನಡೆಸಿದ್ದ ಆರೋಪದ ಮೇರೆಗೆ ಹಿಂದೂಪರ ಸಂಘಟನೆಯ 7 ಮಂದಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಅಪ್ರಾಪ್ತ ವಯಸ್ಸಿನ ಯುವತಿಯೊಂದಿಗೆ ಅನ್ಯಕೋಮಿನ ಯುವಕ ತಿರುಗಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಬಜರಂಗ ದಳ ಕಾರ್ಯಕರ್ತರು ಅಪಹರಿಸಿ ಹಲ್ಲೆ ಮಾಡಿರುವ ಬಗ್ಗೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರುದಾಖಲಾಗಿದೆ.
ಆಲ್ದೂರು ಪಟ್ಟದ ನಿವಾಸಿ ಡ್ಯಾನ್ಸ್ ಮಾಸ್ಟರ್ ಆಗಿರುವ ರುಮಾನ್ ಎಂದು ತಿಳಿದುಬಂದಿದೆ.ಈತನು ಅಪ್ರಾಪ್ತ ಬಾಲಕಿಯನ್ನು ಓಲೈಸುತ್ತಿದ್ದು ವಿಎಚ್ಪಿ ಕಾರ್ಯಕರ್ತರ ಗುಂಪು ‘ಲವ್ ಜಿಹಾದ್’ ಎಂದು ಆರೋಪಿಸಿ ಅವರ ಕಚೇರಿಗೆ ನುಗ್ಗಿದ್ದಾರೆ.
ವಿಎಚ್ಪಿ ಕಾರ್ಯಕರ್ತರು ಒಳಗಿನಿಂದ ಬೀಗ ಹಾಕಿ ಆತನ ಮೇಲೆ ಹಲ್ಲೆ ನಡೆಸಿದ್ದು ಡ್ಯಾನ್ಸ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಜರಂಗ ದಳ ಚಿಕ್ಕಮಗಳೂರು ಜಿಲ್ಲಾ ಸಂಚಾಲಕ ಸಿ.ಡಿ.ಶಿವಕುಮಾರ್, ಸ್ವರೂಪ್, ಕಾರ್ತಿಕ್, ಮಧು, ರಂಜಿತ್, ಪರೀಕ್ಷಿತ್ ಹಾಗೂ ಪ್ರಜ್ವಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಗುರುವಾರ ಕಾರಿನಲ್ಲಿ ಅಪಹರಿಸಿ ಬಳಿಕ ಕೂಡಿ ಹಾಕಿ ಹಲ್ಲೆ ನಡೆಸಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ರುಮಾನ್ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದರು. ಆಲ್ದೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಬಾಲಕಿಯ ಪೋಷಕರು ಆತನ ವಿರುದ್ಧವೂ ದೂರು ದಾಖಲಿಸಿದ್ದು, ಕಿಡ್ನಾಪ್ ಯತ್ನ ಮತ್ತು ಪ್ರೀತಿಯ ಹೆಸರಿನಲ್ಲಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.


