Friday, July 10, 2026
Homeಜಿಲ್ಲೆಚಿಕ್ಕಮಗಳೂರು : ಕಾಫಿನಾಡಿನಲ್ಲಿ ಮಳೆಯ ಅಬ್ಬರ : ಹಾಲ್ನೊರೆಯಂತೆ ಧುಮ್ಮಿಕ್ಕಿದ ಹೆಬ್ಬೆ ಜಲಪಾತ.!

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಮಳೆಯ ಅಬ್ಬರ : ಹಾಲ್ನೊರೆಯಂತೆ ಧುಮ್ಮಿಕ್ಕಿದ ಹೆಬ್ಬೆ ಜಲಪಾತ.!

ಚಿಕ್ಕಮಗಳೂರು : ಪಶ್ಚಿಮ ಘಟ್ಟಗಳ ತಪ್ಪಲಿನ ಕಾಫಿನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿವೆ.

ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಪ್ರಸಿದ್ಧ ಹೆಬ್ಬೆ ಜಲಪಾತ ಇದೀಗ ತನ್ನ ಸಂಪೂರ್ಣ ವೈಭವದಲ್ಲಿ ಧುಮ್ಮಿಕ್ಕುತ್ತಿದ್ದು, ಪ್ರಕೃತಿ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ.
ಸುಮಾರು 100 ಅಡಿ ಎತ್ತರದಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರುವ ಹೆಬ್ಬೆ ಜಲಪಾತದ ಮನಮೋಹಕ ದೃಶ್ಯಗಳು ಎಲ್ಲರ ಗಮನ ಸೆಳೆಯುತ್ತಿವೆ. ಕಾಫಿ ತೋಟಗಳ ಮಧ್ಯೆ ನೆಲೆಸಿರುವ ಈ ಜಲಪಾತವನ್ನು ಸ್ಥಳೀಯರು ಹಾಗೂ ಪ್ರವಾಸಿಗರು “ಮಿನಿ ಜೋಗ” ಎಂದೇ ಕರೆಯುತ್ತಾರೆ.

ಮಳೆಯ ತೀವ್ರತೆಯಿಂದ ಜಲಪಾತದ ಸೌಂದರ್ಯ ಮತ್ತಷ್ಟು ಹೆಚ್ಚಿದ್ದು, ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ, ಮಳೆಯ ಹಿನ್ನೆಲೆಯಲ್ಲಿ ಜಲಪಾತದ ಬಳಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular