Thursday, July 23, 2026
Homeಜಿಲ್ಲೆಚಿಕ್ಕಮಗಳೂರು : ಭಾರೀ ಮಳೆ : ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಭೂಕುಸಿತದ ಆತಂಕ,ವಾಹನ ಸವಾರರಿಗೆ ಜಿಲ್ಲಾಡಳಿತ...

ಚಿಕ್ಕಮಗಳೂರು : ಭಾರೀ ಮಳೆ : ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಭೂಕುಸಿತದ ಆತಂಕ,ವಾಹನ ಸವಾರರಿಗೆ ಜಿಲ್ಲಾಡಳಿತ ಕಟ್ಟೆಚ್ಚರ ಘೋಷಣೆ .

ಚಿಕ್ಕಮಗಳೂರು : ಕಳೆದ ಹಲವುದಿನಗಳಿಂದ ಸುರಿಯುವ ಬಾರಿ ಮಳೆಗೆ ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು ಹಲವು ಜನರು ಪ್ರಾಣವನ್ನು ತೆತ್ತಿದ್ದಾರೆ. ಮಂಗಳೂರಿನಂದ ಚಾರ್ಮಾಡಿಗೆ ಚಲಿಸುವ ಚಾಲಕರು ಕಟ್ಟೆಚ್ಚರ ವಹಿಸಬೇಕೆಂದು ಸೂಚಿಸಿದ್ದಾರೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭೂಕುಸಿತ ಸಂಭವಿಸಿದ ನಂತರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಪರಿಣಾಮವಾಗಿ ಇದೀಗ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕೂಡ ಭೂಕುಸಿತದ ಆತಂಕ ಎದುರಾಗಿದ್ದು ಜಿಲ್ಲಾಡಳಿತ ಕಟ್ಟೆಚ್ಚರ ಘೋಷಿಸಿದೆ.

ಮುಂಗಾರು ಮಳೆ ಅಬ್ಬರದಿಂದ ಸಂಭವಿಸಿದ ಭೂಕುಸಿತಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು, ಹಾಸನ ಹಾಗೂ ಬೆಂಗಳೂರು ಮಧ್ಯದ ಸಂಪರ್ಕ ದುಸ್ತರವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ ಕೆಲವೇ ದಿನಗಳಲ್ಲಿ ಇದೀಗ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿಯೂ ಭೂಕುಸಿತ ಆತಂಕ ಎದುರಾಗಿದೆ.

ಸಕಲೇಶಪುರದ ದೊಡ್ಡತಪ್ಲು ಬಳಿ ಭೂಕುಸಿತದಿಂದಾಗಿ ಶಿರಾಡಿ ಘಾಟಿ ರಸ್ತೆಯಲ್ಲಿ ಸ್ಥಗಿತಗೊಂಡಿದ್ದ ವಾಹನ ಸಂಚಾರ ಶನಿವಾರದಿಂದ ಪುನರಾರಂಭಗೊಂಡಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಘಾಟಿ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಶನಿವಾರದಿಂದ ಸಂಚಾರ ಆರಂಭಗೊಂಡಿದೆ.

ಮುನ್ನೆಚ್ಚರಿಕಾ ಕಾರ್ಯಕ್ರಮವಾಗಿ ಈ ಹಿಂದೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎಲ್ಲೆಲ್ಲಿ ಭೂಕುಸಿತ ಸಂಭವಿಸಿತ್ತು ಅಲ್ಲೆಲ್ಲ ಪರಿಶೀಲನೆ ನಡೆಸುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಡಿಸಿ ಮೀನಾ ನಾಗರಾಜ್‌ ಸಭೆ ನಡೆಸಿದ್ದು, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಜೊತೆಗೆ ಎಸ್ಪಿ ವಿಕ್ರಂ ಅಮ್ಟೆ ಸೇರಿದಂತೆ ಅಧಿಕಾರಿಗಳು ಚಾರ್ಮಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular